# Tags
#ಅಪಘಾತ

ಉಡುಪಿ : ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ – ವಿದ್ಯುತ್ ಶಾರ್ಟ್ ಸರ್ಕ್ಯೂಟ್  ಸಾಧ್ಯತೆ (Udupi : Fire in Ayurveda Hosphital – Possibility of electrical short circuit)

ಉಡುಪಿ : ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ – ವಿದ್ಯುತ್ ಶಾರ್ಟ್ ಸರ್ಕ್ಯೂಟ್  ಸಾಧ್ಯತೆ

(Udupi) ಉಡುಪಿ: ದೊಡ್ಡಣಗುಡ್ಡೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

 ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಸಾಧ್ಯತೆ ಇದ್ದು, ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಹತ್ತಿಕೊಂಡಿದೆ.

ಕಟ್ಟಡದ ನವೀಕರಣ ಆಗುತ್ತಿದ್ದರಿಂದ ಆಸ್ಪತ್ರೆಯಲ್ಲಿ ರೋಗಿಗಳು ಇರಲಿಲ್ಲ. ದೈನಂದಿನ ಕೆಲಸಕ್ಕೆ ಬರುವ ಮಹಿಳೆ ಬೆಂಕಿ ಗಮನಿಸಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ.

ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಇದ್ದು, ಅವರಿಗೆ ಯಾವುದೇ ತೊಂದರೆ ಆಗಿಲ್ಲ.

 ಬೆಂಕಿ ನಂದಿಸಲು ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2