# Tags
#PROBLEMS #ಅಪಘಾತ

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ – 71 ದಿನದ ಬಳಿಕ ಕೇರಳದ ಲಾರಿ, ಚಾಲಕ ಅರ್ಜುನ್‌ ಮೃತದೇಹ ಪತ್ತೆ (Ankola : Shirooru Hill collapse Tragedy – Kerala lorry driver Arjun’s dead body found after 71 days)

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ – 71 ದಿನದ ಬಳಿಕ ಕೇರಳದ ಲಾರಿ, ಚಾಲಕ ಅರ್ಜುನ್ಮೃತದೇಹ ಪತ್ತೆ

(Ankola) ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಲಾರಿ ಹಾಗೂ ಚಾಲಕ ಅರ್ಜುನ್‌ ಅವರ ಮೃತದೇಹ ಬುಧವಾರ (ಸೆ.25ರಂದು) ಪತ್ತೆ ಆಗಿದೆ ಎಂದು ವರದಿಯಾಗಿದೆ.

 ಕಳೆದ 6  ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಯ ಮೂಲಕ ಗಂಗಾವಳಿ ನದಿಯಲ್ಲಿ ಮುಳುಗಿದ್ದ ಅರ್ಜುನ್‌ ಅವರ ಲಾರಿ ಪತ್ತೆಯಾಗಿದ್ದು, ಲಾರಿಯೊಳಗೆ ಅರ್ಜುನ್‌ ಅವರ ಮೃತದೇಹ ಪತ್ತೆಯಾಗಿದೆ ಎಂದು ಕಾರ್ಯಾಚರಣೆಯ ತಂಡದ ಮೂಲಗಳು ತಿಳಿಸಿವೆ.

 ಲಾರಿಯ ಮಾಲೀಕ ಮನಾಫ್‌ ಅವರು ಇದು ತಮ್ಮದೆ ಲಾರಿಯೆಂದು ಗುರುತಿಸಿದ್ದು, ಲಾರಿಯೊಳಗೆ ಮೃತದೇಹ ಪತ್ತೆಯಾಗಿದೆ. ಇದು ಅರ್ಜುನ್‌ ಅವರ ಮೃತದೇಹವೆಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.

 ಶಿರೂರು ಗುಡ್ಡ ಕುಸಿತ ದುರಂತದ ಬಳಿಕ ಗಂಗಾವಳಿ ನದಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಸಹಿತ ಕೆಲ ವಾಹನಗಳು ಮುಳುಗಿದ್ದವು. ಇದರಲ್ಲಿ ಕೆಲ ವಾಹನಗಳ ಅವಶೇಷಗಳು ಪತ್ತೆಯಾಗಿದ್ದವು. ಆದರೆ ಅರ್ಜುನ್‌ ಹಾಗೂ ಲಾರಿಯ ಸುಳಿವು ಸಿಕ್ಕಿರಲಿಲ್ಲ. ಈ ಕಾರ್ಯಾಚರಣೆಗೆ ಈಶ್ವರ್‌ ಮಲ್ಪೆ ಸೇರಿದಂತೆ ಹಲವು ತಂಡ ಕಾರ್ಯಾಚರಣೆ ನಡೆಸಿದ್ದವು.

 ಅರ್ಜುನ್‌ ಅವರ ಜತೆ ಮತ್ತೊಬ್ಬರ ಮೃತದೇಹವೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

  ಜು.16ರಂದು ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದರು.

ಶಿರೂರು ಭೂಕುಸಿತದಲ್ಲಿ ಮೃತಪಟ್ಟ ಕೇರಳದ ಅರ್ಜುನ್ ದೇಹ ಪತ್ತೆ ಹಚ್ಚುವಲ್ಲಿ ರಾಜ್ಯಸರ್ಕಾರ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಕೇರಳ: ಸೆಪ್ಟೆಂಬರ್ 25: ಶಿರೂರಿನ ಭೂ ಕುಸಿತದಲ್ಲಿ ಮೃತಪತ್ತಿದ್ದ ಕೇರಳದ ಅರ್ಜುನ್ ದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೇರಳದ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಉತ್ತರ ಕರ್ನಾಟಕ ಜಿಲ್ಲೆಯಲ್ಲಿನ ಶಿರೂರು ಭೂಕುಸಿತದಲ್ಲಿ ಅರ್ಜುನ್ ಲಾರಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಬಿದ್ದಿದ್ದು ನಾಪತ್ತೆಯಾಗಿತ್ತು.
ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅವರು ಶೋಧಕಾರ್ಯವನ್ನು ಮುಂದುವರೆಸಲು ಸೂಚಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2