# Tags
#protest #ರಾಜಕೀಯ

  ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ:  ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ (Action to fulfil the demands of Anganavadi workers : Minister Laxmi Hebbalkar)

  ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮಸಚಿವೆ ಲಕ್ಷ್ಮೀ ಹೆಬ್ಬಾಳಕರ್

(Belagavi) ಬೆಳಗಾವಿ : ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

 ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ ಅಂಗನವಾಡಿ ನೌಕರರ ಬೆಳಗಾವಿ ಚಲೋ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.

 ಅಂಗನವಾಡಿ ಕಾರ್ಯಕರ್ತರಿಗೆ ವಿಮಾ ಯೋಜನೆ ಜಾರಿ, ವೇತನ ಪರಿಷ್ಕರಣೆ, ಮೊಟ್ಟೆ ದರ ಪರಿಷ್ಕರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

 ಗೃಹಲಕ್ಷ್ಮೀ ಯೋಜನೆಯನ್ನು ನಮ್ಮ ಇಲಾಖೆಯಿಂದ ಜಾರಿಗೆ ತರುವ ಮೂಲಕ ಬಲಿಷ್ಠರಾಗಿದ್ದೇವೆ. ವೇತನ ಹೆಚ್ಚಳ ಏರಿಕೆ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ ಎಂದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಡಾ. ಶಾಮ್ಲಾ ಇಕ್ಬಾಲ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಎನ್. ಸಿದ್ದೇಶ್ವರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್‌, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ  ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2