• Home  
  • ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ (Ministers request to CM for increase in salary of Anganavadi workers)
- ರಾಜಕೀಯ

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ (Ministers request to CM for increase in salary of Anganavadi workers)

Share: ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ   (Bengaluru) ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar), ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದರು.  ವಿಧಾನಸೌಧದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌,    ಅಂಗನವಾಡಿ ಕಾರ್ಯಕರ್ತರು, […]

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂಗೆ ಸಚಿವೆಯ ಮನವಿ

  (Bengaluru) ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar), ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದರು.

 ವಿಧಾನಸೌಧದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌,    ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

 ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

 ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DCM DK Shivkumar), ಗೃಹ ಸಚಿವ ಡಾ.ಜಿ. ಪರಮೇಶ್ವರ್ (Home Minister DR G Parameshwar), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು (CM’S Political Secretary Govind Raju), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.