ಅಂತರ್ ಕಾಲೇಜು ಕರಾಟೆ ಸ್ಪರ್ಧೆ : ಉಡುಪಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಂದ ಶ್ರೇಷ್ಠ ಪ್ರದರ್ಶನ
ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಉಪನ್ಯಾಸಕರಿಂದ ಅಭಿನಂದನೆ
(Mangaluru) ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿದರು.
ಕರಾಟರ ಸ್ಪರ್ಧೆಯಲ್ಲಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಅಂತರ್ ವಿಶ್ವವಿದ್ಯಾಲಯ ದಕ್ಷಿಣ ವಲಯ ಸ್ಪರ್ಧೆಗೆ 4 ವಿದ್ಯಾರ್ಥಿಗಳು – ತೃತೀಯ ಬಿ.ಸಿಎ ವಿದ್ಯಾರ್ಥಿನಿಯರಾದ ಚಯಾ, ಪ್ರಜ್ಞಾ, ಲಿಸಾ ಮತ್ತು ಪ್ರಥಮ ಬಿ.ಬಿ.ಎ ವಿದ್ಯಾರ್ಥಿ ರಿತೇಶ್ ಅವರು ಆಯ್ಕೆಗೊಂಡಿದ್ದಾರೆ.
ವಿಜೇತರಿಗೆ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗದ ಅಧಿಕಾರಿಗಳು ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ವಿತರಿಸಿದರು.
ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

