• Home  
  • ಅಕ್ಕಿ ವಿತರಣೆಯಲ್ಲಿ ಕಾಂಗ್ರೆಸ್‌ ನದ್ದು 50 ಪರ್ಸೆಂಟ್ ಗ್ಯಾರಂಟಿ ಸರಕಾರ ; ಕೋಟಾ ಶ್ರೀನಿವಾಸ್ ಪೂಜಾರಿ
- ವಿಡಿಯೋ

ಅಕ್ಕಿ ವಿತರಣೆಯಲ್ಲಿ ಕಾಂಗ್ರೆಸ್‌ ನದ್ದು 50 ಪರ್ಸೆಂಟ್ ಗ್ಯಾರಂಟಿ ಸರಕಾರ ; ಕೋಟಾ ಶ್ರೀನಿವಾಸ್ ಪೂಜಾರಿ

Share: ಉಡುಪಿ: ಅಕ್ಕಿ ಕೊಡುವ ಭರವಸೆ ನೀಡಿದ್ದೀರಿ. ಆದರೆ ಈಗ 5 ಕೆಜಿ ಅಕ್ಕಿಯ ಹಣ ನೀಡಲು ತೀರ್ಮಾನ ಮಾಡಿದ್ದೀರಿ. ಹಾಗಾದರೆ ನಿಮ್ಮದು 50 ಪರ್ಸೆಂಟ್ ಗ್ಯಾರಂಟಿ ಸರ್ಕಾರವಾ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಚಿವರು, ಕೇಂದ್ರ ಸರಕಾರ ಬಿಪಿಎಲ್ ಇರುವವರಿಗೆ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡುತ್ತಿದೆ.ಇದಕ್ಕೆ ಒಂದು ತಿಂಗಳಿಗೆ ಕೇಂದ್ರ ಸರಕಾರಕ್ಕೆ 18ರಿಂದ 19 ಸಾವಿರ ಕೋಟಿ ಖರ್ಚಾಗುತ್ತದೆ. […]

ಉಡುಪಿ: ಅಕ್ಕಿ ಕೊಡುವ ಭರವಸೆ ನೀಡಿದ್ದೀರಿ. ಆದರೆ ಈಗ 5 ಕೆಜಿ ಅಕ್ಕಿಯ ಹಣ ನೀಡಲು ತೀರ್ಮಾನ ಮಾಡಿದ್ದೀರಿ. ಹಾಗಾದರೆ ನಿಮ್ಮದು 50 ಪರ್ಸೆಂಟ್ ಗ್ಯಾರಂಟಿ ಸರ್ಕಾರವಾ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.

 ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಚಿವರು, ಕೇಂದ್ರ ಸರಕಾರ ಬಿಪಿಎಲ್ ಇರುವವರಿಗೆ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡುತ್ತಿದೆ.ಇದಕ್ಕೆ ಒಂದು ತಿಂಗಳಿಗೆ ಕೇಂದ್ರ ಸರಕಾರಕ್ಕೆ 18ರಿಂದ 19 ಸಾವಿರ ಕೋಟಿ ಖರ್ಚಾಗುತ್ತದೆ. ತೆಲಂಗಾಣದಲ್ಲಿ ಕೇಂದ್ರ ಸರಕಾರದ ಅಕ್ಕಿ ಎಂದು ರಶೀದಿ ನೀಡುತ್ತಿದ್ದಾರೆ.

ಆದರೆ ಸಿದ್ದರಾಮಯ್ಯನವರು ಇದನ್ನು ನಮ್ಮ ಅಕ್ಕಿ ನಮ್ಮ ಅಕ್ಕಿ ಅಂತ ಹೇಳುತ್ತಿದ್ದಾರೆ . ಆಹಾರ ಭದ್ರತಾ ಕಾಯ್ದೆಗೆ ಸ್ಪಷ್ಟ ರೂಪ ಕೊಟ್ಟು ಅನುಷ್ಠಾನ ಮಾಡಿದ್ದು ನರೇಂದ್ರ ಮೋದಿಯವರು ಎಂದು ಹೇಳಿದ್ದಾರೆ.

 ನೀವು ಈಗ ಅಕ್ಕಿ ಸಿಕ್ಕಿಲ್ಲ ಹಣ ಕೊಡುತ್ತೇವೆ ಎನ್ನುತ್ತಿದ್ದೀರಿ. ನೀವು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತ ಹೇಳುವಾಗ  ಕೇಂದ್ರದ 5 ಕೆ.ಜಿ ಅಕ್ಕಿ ಸೇರಿ ಅಂತ ಹೇಳಿದ್ದೀರಾ ? ಹಾಗಾದ್ರೆ ಕೇಂದ್ರ ನೀಡುವ ಅಕ್ಕಿಗೆ ರಾಜ್ಯದಿಂದ ಹಣ ನೀಡುತ್ತಿದ್ದೀರಾ? ಜನರಿಗೆ ತಪ್ಪು ಮಾಹಿತಿ ಕೊಡಬೇಡಿ.

ನೀವು 10 ಕೆಜಿ ಅಕ್ಕಿ ಕೊಡುತ್ತೇವೆ ಹೇಳಿದ್ದೀರಿ.10 ಕೆಜಿ ಅಕ್ಕಿ ಕೊಡಬೇಕಲ್ವಾ? ಈಗ ನಿಮ್ಮದು 50 ಪರ್ಸೆಂಟ್ ಗ್ಯಾರಂಟಿ ಆಯ್ತು. ಇನ್ನು 34 ರೂಪಾಯಿಗೆ ಅಕ್ಕಿ ಬರುವುದಿಲ್ಲ. ಅದರಲ್ಲೂ ಹಣ ಉಳಿಸಿಕೊಳ್ಳಲು ಒದ್ದಾಟ ಮಾಡುತ್ತಿದ್ದೀರಿ.

ದಯವಿಟ್ಟು ಕರ್ನಾಟಕದ ಜನರನ್ನು ತಪ್ಪು ಹಾದಿಗೆ ಎಳೆಯಬೇಡಿ ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.