• Home  
  • ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ
- ಕರಾವಳಿ - ರಾಜಕೀಯ

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ

Share: ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಸಂಸದ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಇಂದು ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.  ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ […]

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು: ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ

ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಸಂಸದ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಇಂದು ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

 ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ಸಚಿವರು ಸಂಸದ ನಳಿನ್‌ಕುಮಾರ್‌ ರವರಿಗೆನೀಡಿದ್ದಾರೆ. 

 ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಮಾನ್ಯ ಸಚಿವರನ್ನು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.

 ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ  ಹೊರಟು ಮಂಗಳೂರಿಗೆ  ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ನೀಡಿದರು.

 ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ಕಟೀಲ್‌ ತಿಳಿಸಿದ್ದಾರೆ.

 ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಭದ ನಿವಾರಣೆಯ ಬಗ್ಗೆ ಮಾನ್ಯ ಸಂಸದ ನಳಿನ್‌ ಕುಮಾರ್‌ ಕಟೀಲು ಮಾನ್ಯ ಸಚಿವರ ಗಮನ ಸೆಳೆದಾಗ, ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.