• Home  
  • ಅಥಣಿ: ಅಂಗವೈಕಲ್ಯ ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ (Overcoming disability, selected for district-level sports meet)
- ಕ್ರೀಡೆ

ಅಥಣಿ: ಅಂಗವೈಕಲ್ಯ ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ (Overcoming disability, selected for district-level sports meet)

Share: ಅಥಣಿ: ಅಂಗವೈಕಲ್ಯ ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ   ಶಾಸಕ ರಾಜು ಕಾಗೆ ಅವರಿಂದ ವಿದ್ಯಾರ್ಥಿನಿ ಸೃಷ್ಟಿಯವರಿಗೆ ಸನ್ಮಾನ   (Athani) ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಿದ್ದೇವಾಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಭರತೇಶ ನಂದಗಾಂವೆ, ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.    ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ತುಕಾನಟ್ಟಿಯಲ್ಲಿ […]

  (Athani) ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಿದ್ದೇವಾಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಭರತೇಶ ನಂದಗಾಂವೆ, ತಮ್ಮ ಅಂಗವೈಕಲ್ಯವನ್ನು ಮೆಟ್ಟಿ ನಿಂತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

   ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ತುಕಾನಟ್ಟಿಯಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸೃಷ್ಟಿ, ಭಲ್ಲೆ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ತಾನು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಅಸಾಧಾರಣ ಪ್ರತಿಭೆ ಮೆರೆದು ರಾಜ್ಯಮಟ್ಟಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

  ವಿದ್ಯಾರ್ಥಿನಿಯ ಈ ಹೆಮ್ಮೆಯ ಸಾಧನೆಯನ್ನು ಗುರುತಿಸಿದ ಕಾಗವಾಡ ಕ್ಷೇತ್ರದ ಶಾಸಕರಾದ ರಾಜು ಕಾಗೆ ಅವರು ಸೃಷ್ಟಿ ನಂದಗಾಂವೆ ಅವರನ್ನು ಆತ್ಮೀಯವಾಗಿ ಅಭಿನಂದಿಸಿ, ಗೌರವಿಸಿದರು.

   ಮದಭಾವಿ ಗ್ರಾಮದ ಮುಖಂಡರಾದ ಪ್ರವೀಣ ನಾಯಿಕ, ಮಹಾಂತೇಶ ನೇಜ್, ಶಾಲೆಯ ಮುಖ್ಯೋಪಾಧ್ಯಾಯರಾದ ಪಿ. ಆರ್. ಇಂಗಳಗಾವಿ,  ದೈಹಿಕ ಶಿಕ್ಷಣ ಶಿಕ್ಷಕರಾದ ಎಂ. ಬಿ. ಭಾವ ಉಪಸ್ಥಿತರಿದ್ದರು.

  ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಎಲ್ಲ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.