• Home  
  • ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Adamaru PPC College campus World Envirvonment day Celebration)
- ಶಾಲಾ ಕಾಲೇಜು

ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Adamaru PPC College campus World Envirvonment day Celebration)

Share: ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Padubidri) ಪಡುಬಿದ್ರಿ:  ಇಲ್ಲಿನ ಅದಮಾರು  ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್  ಹಾಗೂ ಪ್ರಜ್ಞಾ ಇಕೋ ಕ್ಲಬ್ಬಿನ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಹಾಗೂ ಔಷಧೀಯ ಸಸಿಗಳ ಪ್ರಾಧಾನ್ಯತೆಯ ಕುರಿತು ಉಪನ್ಯಾಸ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜು ಪರಿಸರದಲ್ಲಿ ಬಿಲ್ಲಪತ್ರೆ ಪಾರಿಜಾತ, ಸಂಪಿಗೆ, ಅನನಾಸು ಹಾಗೂಅಡಿಕೆ ಮೊದಲಾದ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಳಿಕ […]

ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

(Padubidri) ಪಡುಬಿದ್ರಿ:  ಇಲ್ಲಿನ ಅದಮಾರು  ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್  ಹಾಗೂ ಪ್ರಜ್ಞಾ ಇಕೋ ಕ್ಲಬ್ಬಿನ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಹಾಗೂ ಔಷಧೀಯ ಸಸಿಗಳ ಪ್ರಾಧಾನ್ಯತೆಯ ಕುರಿತು ಉಪನ್ಯಾಸ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾಲೇಜು ಪರಿಸರದಲ್ಲಿ ಬಿಲ್ಲಪತ್ರೆ ಪಾರಿಜಾತ, ಸಂಪಿಗೆ, ಅನನಾಸು ಹಾಗೂಅಡಿಕೆ ಮೊದಲಾದ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯರಾದ ಡಾ. ಪಯಸ್ವಿನಿ ಅವರು ಮಾತನಾಡಿ, ನಮ್ಮ ಪರಿಸರ ಸ್ವಚ್ಛವಾಗಿ ಇರಿಸುವುದರ ಜೊತೆಗೆ ಔಷಧೀಯ ಸಸ್ಯಗಳ ಪರಿಚಯವನ್ನು ಮಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಗಿಡಗಳಲ್ಲಿ ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಗಿಡಗಳೇ ಇರುತ್ತವೆ. ವಿದ್ಯಾರ್ಥಿಗಳು ಇದನ್ನು ಗುರುತಿಸಬೇಕಾಗಿದೆ ಎಂದು ಸ್ವತಹ ಗಿಡಗಳನ್ನು ಪ್ರದರ್ಶಿಸುವ ಮೂಲಕ ಮಕ್ಕಳಿಗೆ ಪರಿಚಯಿಸಿದರು.

 ಸಂಸ್ಥೆಯ ಪ್ರಾಂಶುಪಾಲ ಸಂಜೀವ್ ನಾಯಕ್ ಮಾತನಾಡಿ, ಮಕ್ಕಳು ಪರಿಸರದ ಕಾಳಜಿಯನ್ನು ಹೊಂದಬೇಕು. ಅನಗತ್ಯ ಪರಿಸರ ಮಾಲಿನ್ಯ ಮಾಡಬಾರದು ಎಂದರು.

 ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ  ಮಂಜುನಾಥ ಏ. ರವರು ಮಕ್ಕಳು ತಮ್ಮ ಮಟ್ಟದಲ್ಲಿ ಪರಿಸರದ ವಿಚಾರಗಳನ್ನು ತಿಳಿದುಕೊಳ್ಳಬೇಕು, ಕೇವಲ ಪುಸ್ತಕ ಮಾತ್ರದಿಂದ ಜ್ಞಾನ ಸಿಗುವುದಿಲ್ಲ ಪರಿಸರದಿಂದಲೂ ನಾವು ಪಡೆದುಕೊಳ್ಳಬೇಕು ಎಂದರು.

  ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಕಾಂತ ರಾವ್ ಮಾತನಾಡಿ, ಪ್ಲಾಸ್ಟಿಕ್ ವಸ್ತುಗಳನ್ನು   ಮರುಬಳಕೆ ಮಾಡಬೇಕೆಂದರು.

 ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರತಿನಿಧಿ ಪ್ರೊಫೆಸರ್ ನಿತ್ಯಾನಂದರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 ಪರಿಸರ ಸಂಬಂಧಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪ ಮುಖ್ಯೋಪಾಧ್ಯಾಯನಿ ಶ್ರೀಮತಿ ನಿಶ್ಮಿತಾ ಶೆಟ್ಟಿ ಸ್ವಾಗತಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿ ಶಮೃತ್ ಕಾರ್ಯಕ್ರಮ ನಿರೂಪಿಸಿದರು.

 ವಿಜ್ಞಾನ ಶಿಕ್ಷಕಿ ಶ್ರೀಮತಿ ನವ್ಯ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.