• Home  
  • ಅದಾನಿ ಸಿಎಸ್‌ಆರ್: ಬೆಳಪು ಗ್ರಾ. ಪಂ. ವ್ಯಾಪ್ತಿಯಲ್ಲಿ ರೂ. 20 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ. (Adani CSR: Ground-breaking ceremony for road works costing ₹20 lakh within the Belapu Gram Panchayat limits.)
- ಸಂಘ, ಸಂಸ್ಥೆಗಳು - ಸಹಾಯ ಹಸ್ತ

ಅದಾನಿ ಸಿಎಸ್‌ಆರ್: ಬೆಳಪು ಗ್ರಾ. ಪಂ. ವ್ಯಾಪ್ತಿಯಲ್ಲಿ ರೂ. 20 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ. (Adani CSR: Ground-breaking ceremony for road works costing ₹20 lakh within the Belapu Gram Panchayat limits.)

Share: ಅದಾನಿ ಸಿಎಸ್‌ಆರ್: ಬೆಳಪು ಗ್ರಾ. ಪಂ. ವ್ಯಾಪ್ತಿಯಲ್ಲಿ ರೂ. 20 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ. ಭೂಮಿಪೂಜೆ ನೆರವೇರಿಸಿದ ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ (Belapu) ಬೆಳಪು: ಕಾಪು ತಾಲೂಕಿನ ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಪವರ್ ಲಿಮಿಟೆಡ್‌ಸಂಸ್ಥೆಯು ತನ್ನ ಸಿಎಸ್‌ಆರ್ ಅಂಗವಾದ ಅದಾನಿ ಫೌಂಡೇಶನ್‌ ಮುಖಾಂತರ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು ರೂ. 20ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಮೂರು ರಸ್ತೆ ಅಭಿವೃದ್ಧಿ […]

(Belapu) ಬೆಳಪು: ಕಾಪು ತಾಲೂಕಿನ ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಪವರ್ ಲಿಮಿಟೆಡ್‌ಸಂಸ್ಥೆಯು ತನ್ನ ಸಿಎಸ್‌ಆರ್ ಅಂಗವಾದ ಅದಾನಿ ಫೌಂಡೇಶನ್‌ ಮುಖಾಂತರ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು ರೂ. 20ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಮೂರು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

 ಅದಾನಿ ಫೌಂಡೇಶನ್‌ ವಾರ್ಷಿಕ ಸಿಎಸ್‌ಆರ್ ಕಾರ್ಯಕ್ರಮದ ಅಂಗವಾಗಿ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಗಳಲ್ಲಿ ಪಣಿಯೂರು-ಭಾಸ್ಕರ ಅಮೀನ್ ರಸ್ತೆ ಕಾಂಕ್ರೆಟೀಕರಣ, ವಾಜಪೇಯಿ ಬಡಾವಣೆಯಲ್ಲಿನ ರಸ್ತೆ ಕಾಂಕ್ರೆಟೀಕರಣ, ಹಾಗೂ ಮಿಲಿಟರಿ ಕಾಲೋನಿಯಲ್ಲಿನ ರಸ್ತೆ ಕಾಂಕ್ರೆಟೀಕರಣ ಸೇರಿವೆ.

  ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷರಾದ ಕಿಶೋರ್ ಆಳ್ವ ಮತ್ತು ಬೆಳಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಜಂಟಿಯಾಗಿ ಭೂಮಿಪೂಜೆ ನೆರವೇರಿಸಿದರು. 

  ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಆಳ್ವ ಅವರು, ಬೆಳಪು ದಕ್ಷಿಣಾ ಏಷ್ಯಾದಲ್ಲಿಯೇ ಮಾದರಿ ಗ್ರಾಮವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಕಾಪು ತಾಲೂಕಿನ ಪ್ರಮುಖ ಕೈಗಾರಿಕಾ ಕೇಂದ್ರವಾಗಿ ಬೆಳೆಯುತ್ತಿದೆ. ಗ್ರಾಮದಲ್ಲಿ ಹಲವು ಎಂ.ಎಸ್.ಎಎ.ಈ ಘಟಕಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಬೆಳಪು ಅಭಿವೃದ್ಧಿಯ ಹೊಸ ಹಂತಕ್ಕೆ ಸಾಗುತ್ತಿದೆ ಎಂದು ಹೇಳಿದರು. 

 “ಅದಾನಿ ಪವರ್ ಲಿಮಿಟೆಡ್ ಬೆಳಪು ಗ್ರಾಮ ಪಂಚಾಯತ್ ಅನ್ನು ತನ್ನ ಸಿಎಸ್‌ಆರ್ ವ್ಯಾಪ್ತಿಗೆ ಒಳಪಡಿಸಿಕೊಂಡು ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸಮುದಾಯ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರವಾಗಿ ಕೊಡುಗೆ ನೀಡುತ್ತಿದೆ.  ಗ್ರಾಮ ಪಂಚಾಯತ್ ವತಿಯಿಂದ ಸಲ್ಲಿಸಲಾಗುವ ಕ್ರಿಯಾ ಯೋಜನೆಗಳನ್ನು ಅದಾನಿ ಫೌಂಡೇಶನ್ನ ಸಿಎಸ್‌ಆರ್ ಅನುದಾನದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ” ಎಂದು ಆಳ್ವ ಹೇಳಿದರು.

 ಈ ಸಂದರ್ಭದಲ್ಲಿ ಬೆಳಪು ಗ್ರಾಮ ಪಂಚಾಯತ್‌ನ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಸಹಕಾರ ನೀಡುತ್ತಿರುವ ಅದಾನಿ ಸಂಸ್ಥಗೆ ಸ್ಥಳೀಯರು ಕೃತಜ್ಙತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.