# Tags
#ರಾಜಕೀಯ

ಅನ್ನಭಾಗ್ಯ: ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಅನ್ನಭಾಗ್ಯ: ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ನೀಡಲು ನಿರ್ಧರಿಸಿದೆ.

ಈಗಾಗಲೇ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆಜಿ ಅಕ್ಕಿಗೆ ರೂ 170 ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಆಹಾರ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಅಕ್ಕಿ ಸಿಗುವವರೆಗೆ ಮಾತ್ರ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ. ಈ ಮಧ್ಯೆ, ಒಟ್ಟು 15 ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಿರ್ಣಯ ಕೈಗೊಂಡಿದ್ದೇವೆ. ಈ ಪೈಕಿ ನಾಲ್ಕು ವಿಷಯಗಳು ಲೋಕಾಯುಕ್ತಕ್ಕೆ ಸಂಬಂಧಪಟ್ಟಿದ್ದು. ಕರ್ನಾಟಕ ಲೋಕಾಯುಕ್ತದ ಉಪನಿರ್ದೇಶಕರು, ಲೆಕ್ಕಪತ್ರ ಅಪರ ನಿಬಂಧಕರು ಗುತ್ತಿಗೆ ಮೇಲೆ ನೇಮಕ ಆಗಿದ್ದರು. ಇವರ ಸೇವೆಯನ್ನು ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್ಕೆ ಪಾಟೀಲ್ ತಿಳಿಸಿದರು.
ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಣ ಜಟಾಪಟಿಗೂ ಕಾರಣವಾಗಿತ್ತು. ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.

ಬಡವರ ಕಾರ್ಯಕ್ರಮಕ್ಕೆ ಕಲ್ಲುಹಾಕುವ ಕೆಲಸ ಮಾಡಿದ್ದಾರೆ; ಸಿದ್ದರಾಮಯ್ಯ
ಹಣ ಕೊಡುತ್ತೇವೆ ಎಂದರೂ ಕೇಂದ್ರ ಅಕ್ಕಿ ಪೂರೈಸಲು ಸಿದ್ಧರಿಲ್ಲ ಬಡವರ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ ಸಂಪುಟ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ಆಹಾರ ಸಚಿವ ಮುನಿಯಪ್ಪ ಗೋಯಲ್ರನ್ನು ಭೇಟಿ ಮಾಡಿದ್ದರು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅಕ್ಕಿ ಇಲ್ಲ ಎಂದಿದ್ದಾರೆ ನಾನೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದೆ ಆಹಾರ ಸಚಿವ ಪಿಯೂಷ್ ಗೋಯಲ್ಗೆ ಹೇಳುತ್ತೇನೆ ಎಂದಿದ್ದ ಶಾ ನಂತರ K.H.ಮುನಿಯಪ್ಪ ಗೋಯಲ್ ಭೇಟಿಯಾಗಿ ಮನವಿ ಮಾಡಿದ್ದರು ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಗೋಯಲ್ ಹೇಳಿದ್ದರು ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2