‘ಅಪಘಾತ ರಹಿತ ಚಾಲಕ ಪ್ರಶಸ್ತಿ’ ಪಡೆದ ಚಾಲಕ ಅಲೆಕ್ಸಾಂಡರ್ ಕುಲಾಸೊ ನಿಧನ (Alexander Khulaso, Driver who received the “Accident Free Driver” Award, passed away.)
‘ಅಪಘಾತ ರಹಿತ ಚಾಲಕ ಪ್ರಶಸ್ತಿ ́ ಪಡೆದ ಚಾಲಕ ಅಲೆಕ್ಸಾಂಡರ್ ಕುಲಾಸೊ ನಿಧನ
(Udupi) ಉಡುಪಿ: ಪರ್ಕಳ – ಮಟ್ಟು ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಂಬರೀಶ್ ಬಸ್ ನಲ್ಲಿ 40ಕ್ಕೂ ಅಧಿಕ ವರ್ಷಗಳ ಕಾಲ ಚಾಲಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿ, ‘ಅಪಘಾತ ರಹಿತ ಚಾಲಕ ಪ್ರಶಸ್ತಿ’ ಪುರಸ್ಕತರಾಗಿದ್ದ ಉದ್ಯಾವರದ ಅಲೆಕ್ಸಾಂಡರ್ ಕುಲಾಸೊ (75) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಅತ್ಯಂತ ಸರಳ ಸ್ವಭಾವದವರಾಗಿದ್ದ ಕುಲಾಸೋರವರು, ಹಾಸ್ಯದ ಮಾತುಗಳ ಮೂಲಕವೇ ಎಲ್ಲರ ಮನ ಗೆಲ್ಲುತ್ತಿದ್ದರು. ಸಿಟಿ ಬಸ್ಸಿನ ಚಾಲಕರಾಗಿದ್ದ ಇವರು ಕೆಲವೇ ವರ್ಷಗಳ ಹಿಂದೆ ತನ್ನ ವೃತ್ತಿಗೆ ನಿವೃತ್ತಿ ಹೇಳಿದ್ದರು. ಬಳಿಕ ರಿಕ್ಷಾ ಚಾಲಕರಾಗಿಯೂ ಗುಡ್ಡೆಯಂಗಡಿ ಬಲಾಯ್ ಪಾದೆ ರಿಕ್ಷಾ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ್ದರು.
ಸ್ನೇಹಜೀವಿಯಾಗಿದ್ದ ಅಲೆಕ್ಸಾಂಡರ್ ಕುಲಾಸೊರವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.