# Tags
#ಅಪರಾಧ

 ಅರಣ್ಯ ಇಲಾಖಾ ಕಚೇರಿಯಲ್ಲಿ‌ ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತ್ಯು‌ (Died after collapsing while on duty in the forest department office)

ಅರಣ್ಯ ಇಲಾಖಾ ಕಚೇರಿಯಲ್ಲಿಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಮೃತ್ಯು

(Bantwala) ಬಂಟ್ವಾಳ: ರಾತ್ರಿ ಪಾಳಿಯ  ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವರು ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.
 ವೀರಕಂಬ ಗ್ರಾಮದ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ ಮೃತಪಟ್ಟವರೆಂದು ಗುರುತಿಸಲಾಗಿದೆ.

  ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
  ಅರಣ್ಯ ಇಲಾಖೆಯಲ್ಲಿ ಶುಕ್ರವಾರ ರಾತ್ರಿ ಪಾಳಿಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆ ಸುತ್ತು ಬರುವ ಬಗ್ಗೆ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರೆನ್ನಲಾಗಿದೆ.
 ಬಳಿಕ ಕಚೇರಿಯೊಳಗೆ ಒಬ್ಬರೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿ ಕೋಣೆಯೊಳಗೆ ಮಲಗಲೆಂದು ಹೋಗುವ ವೇಳೆ ಟೇಬಲ್ ಮೇಲೆಯೇ ಕುಸಿದು ಬಿದ್ದಿದ್ದು, ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.
 ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಪಾಲಕರಾದ ಜಿತೇಶ್ ಅವರು ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ತೆರೆಯದಿರುವುದರಿಂದ ಅನುಮಾನಗೊಂಡು  ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.
  ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ಪರಿಶೀಲಿಸಿದಾಗ ಜಯರಾಮ ಅವರು ಅದಾಗಲೇ ಕೊನೆಯುಸಿರೆಳೆದಿರುವುದು ಕಂಡುಬಂದಿದೆಯಾದರೂ, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ, ಪರೀಕ್ಷಿಸಿದ  ವೈದ್ಯರು ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ  ಎಂದು ಅರಣ್ಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರು ತಾಯಿ ಹಾಗೂ ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. 

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2