ಅರುಣ್ ಉಪಾಧ್ಯಾಯ ಅವರಿಗೆ ಪಿ. ಎಚ್. ಡಿ ಪದವಿ ಪ್ರಧಾನ
ಡಾಕ್ಟರೇಟ್ ಪದವಿ ನೀಡಿದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
(Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥರಾಗಿರುವ ಅರುಣ್ ಉಪಾಧ್ಯಾಯ ಇವರು ಎ ಜೆ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಮಂಗಳೂರು ಇಲ್ಲಿನ ಪ್ರಾಂಶುಪಾಲ ಡಾ. ಶಾಂತರಾಮ ರೈ ಸಿ, ಯವರ ಮಾರ್ಗದರ್ಶನದಲ್ಲಿ ಮಂಡಿಸಿದ “ Security Enhanced Hybrid Digital Image Encryption Technique.”ಎಂಬ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ಮತ್ತು ಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

