ಅ.9 ; ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ಬೃಹತ್ ಉದ್ಯೋಗ ಮೇಳ
ಎಂಆರ್ಜಿ ಗ್ರೂಪ್ನ ಪ್ರಾಯೋಜಕತ್ವದ 5ನೇ ಉದ್ಯೋಗ ಮೇಳ
(Kunthala Nagara) ಕುಂತಳ ನಗರ; ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ಟ್ರಸ್ಟ್ವತಿಯಿಂದ ಸಂಘದ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನಲ್ಲಿ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಎಂಆರ್ಜಿ ಗ್ರೂಪ್ನ ಪ್ರಾಯೋಜಕತ್ವದ 5ನೇ ಉದ್ಯೋಗ ಮೇಳ ಅ.9 ರಂದು ಜರುಗಲಿದೆ.
ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್ಮೆಂಟ್ ಮತ್ತು ಟೈನಿಂಗ್ ವಿಭಾಗದ ಮುಖ್ಯಸ್ಥ ಭರತ್ ಕುಮಾರ್ ಹಾಗೂ ತಂಡದ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಬಾರಿಯ ಉದ್ಯೋಗ ಮೇಳದಲ್ಲಿ ನಾನಾ ಕ್ಷೇತ್ರಗಳಿಗೆ ಸಂಬಂಧಿಸಿದ 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಎಂಜಿನಿಯರಿಂಗ್ ಪದವಿಧರರು, ಡಿಪ್ಲೊಮಾ, ಐಟಿಐ, ಎಂಬಿಎ ಸಹಿತ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವೀಧರರು, ಪಿಯುಸಿ, ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಉದ್ಯೋಗಾಕಾಂಕ್ಷಿಗಳು ಒಂದೇ ವೇದಿಕೆಯಲ್ಲಿ ಹಲವು ಕಂಪನಿಗಳ ಪ್ರತಿನಿಧಿಗಳನ್ನು ನೇರವಾಗಿ ಭೇಟಿ ಮಾಡಿ, ಕೌಶಲ್ಯಕ್ಕೆ ಅನುಗುಣವಾದ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಪಡೆದು ಸಂದರ್ಶನದಲ್ಲಿ ಭಾಗವಹಿಸಲು ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ಅವರ ಕೌಶಲ್ಯ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಕಂಪನಿಗಳೊಂದಿಗೆ ನೇರ ಸಂಪರ್ಕ ಕಲ್ಪಿಸುವುದು ಹಾಗೂ ಗ್ರಾಮೀಣ ಭಾಗದ ಪ್ರತಿಭಾವಂತ ಯುವಕ-ಯುವತಿ ಯರಿಗೆ ಉತ್ತಮ ವೃತ್ತಿಜೀವನ ರೂಪಿಸಿ ಕೊಳ್ಳಲು ವೇದಿಕೆ ಒದಗಿಸುವುದು ಈ ಉದ್ಯೋಗ ಮೇಳದ ಪ್ರಮುಖ ಉದ್ದೇಶವಾಗಿದೆ.
ವಿದೇಶಿ ಉನ್ನತ ಶಿಕ್ಷಣಕ್ಕೆ ವಿಶೇಷ ಮಾರ್ಗದರ್ಶನ: ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗಾಗಿ ವಿಶೇಷ ಮಾಹಿತಿ ಮತ್ತು ಮಾರ್ಗದರ್ಶನ ವ್ಯವಸ್ಥೆಯನ್ನೂ ಈ ಸಂದರ್ಭ ಮಾಡಲಾಗುತ್ತಿದೆ. ವಿದೇಶಿ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪ್ರತಿನಿಧಿಗಳು ಭಾಗವಹಿಸಿ, ನಾನಾ ಕೋರ್ಸ್ಗಳು, ವಿಶ್ವ ವಿದ್ಯಾಲಯಗಳ ಆಯ್ಕೆ, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿವೇತನ, ಶಿಕ್ಷಣ ಸಾಲ, ಹಾಗೂ IELTS/TOEFL/PTE/GRE/GMAT ಮುಂತಾದ ಪರೀಕ್ಷೆಗಳು ಹಾಗೂ ಪೀಸಾ ಪ್ರಕ್ರಿಯೆ ಸೇರಿದಂತೆ ವಿದೇಶಿ ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿ ಯನ್ನು ನೀಡಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಅಥವಾ ನೋಂದಣಿ ಲಿಂಕ್ ಮೂಲಕ https://forms.gle/cLx9WGdptoiJ Ysvx7? utm_source ಮೂಲಕ ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ ಬಹುದು ಎಂದು ಪ್ರಕಟಣೆ ತಿಳಿಸಿದೆ.

