# Tags
#ಅಪರಾಧ

ಆಂಧ್ರ ರೈಲು ದುರಂತ: (Andra Pradesha Rail Accident) ಮೃತರ ಸಂಖ್ಯೆ 13ಕ್ಕೆ ಏರಿಕೆ, 18 ರೈಲು ರದ್ದು, 22ರ ಮಾರ್ಗ ಬದಲಾವಣೆ

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 18 ರೈಲು ರದ್ದು, 22 ಮಾರ್ಗ ಬದಲಾವಣೆ

(Vishakhapattanam) ವಿಶಾಖಪಟ್ಟಣಂ:ಅಕ್ಟೋಬರ್ 30 :ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈವರೆಗೆ 13 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ 7 ಜನರನ್ನು ಈಗಾಗಲೇ ಗುರುತಿಸಲಾಗಿದೆ ಮತ್ತು ಶವಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿಜಯನಗರಂ ಪೊಲೀಸ್ ವರಿಷ್ಠಾಧಿಕಾರಿ ಎಂ ದೀಪಿಕಾ ತಿಳಿಸಿದ್ದಾರೆ

ರಕ್ಷಣಾ ಕಾರ್ಯಾಚರಣೆ ಈಗ ಮುಗಿದಿದೆ. ಸಿಕ್ಕಿಬಿದ್ದ ಪ್ರಯಾಣಿಕರಿಗೆ ನಾವು ಬಸ್ಸುಗಳು ಮತ್ತು ರೈಲುಗಳನ್ನು ವ್ಯವಸ್ಥೆ ಮಾಡಿದ್ದೇವೆ. ಒಟ್ಟು 18 ರೈಲುಗಳನ್ನು ರದ್ದುಪಡಿಸಲಾಗಿದೆ ಮತ್ತು 22 ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ನಾವು ಇಂದು ಸಂಜೆ 4 ಗಂಟೆಯ ವೇಳೆಗೆ ಟ್ರ್ಯಾಕ್ ಅನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಸ್ವಜಿತ್ ಸಾಹು ಹೇಳಿದ್ದಾರೆ

ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸಲಿಲ್ಲ. ಮಾನವ ದೋಷದಿಂದಲೇ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಹಾನಿಗೊಳಗಾದ ಹಾಗೂ ಹಳಿ ತಪ್ಪಿದ ಕೋಚ್‌ಗಳನ್ನು ಹೊರತುಪಡಿಸಿ ಉಳಿದ ಕೋಚ್‌ಗಳನ್ನು ಸ್ಥಳದಿಂದ ತೆರವು ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ (Railway Minister Aswin Vaishnav) ಹೇಳಿದ್ದಾರೆ.

 ನಿನ್ನೆ ಸಂಜೆ ಘಟನಾ ಸ್ಥಳದಿಂದ ಸೆರೆಯಾದ ಚಿತ್ರಗಳಲ್ಲಿ ಕೋಚ್‌ಗಳು ಉರುಳಿ ಬಿದ್ದಿರುವುದು ಹಾಗೂ ಜನರು ಸುತ್ತಲೂ ನಿಂತಿರುವುದನ್ನು ತೋರಿಸಿವೆ. 40 ಜನರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರೂ ಆಂಧ್ರಪ್ರದೇಶದವರೇ ಆಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವಿಜಿನಗರಮ್‌ ಜಿಲ್ಲಾಡಳಿತ ಮಾಹಿತಿ ನೀಡಿದೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ ಪರಿಹಾರವನ್ನು ಘೋಷಿಸಲಾಗಿದೆ. ಹಾಗೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಹಾಗೆಯೇ ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

ಈ ರೈಲು ಅಪಘಾತದಿಂದಾಗಿ 18 ರೈಲುಗಳ ಪ್ರಯಾಣವನ್ನು ರದ್ದು ಮಾಡಲಾಗಿದ್ದು, 22ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿಶಾಖಪಟ್ಟಣಂ ಮತ್ತು ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದಾಗ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿ ದುರಂತ ಸಂಭವಿಸಿದೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2