• Home  
  • ಆನಂದ್ ಸಿ. ತಿರುಮಲ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Presentation of the Suvarna Karnataka Rajyotsava Award to Anand C. Thirumala)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಆನಂದ್ ಸಿ. ತಿರುಮಲ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Presentation of the Suvarna Karnataka Rajyotsava Award to Anand C. Thirumala)

Share: ಆನಂದ್ ಸಿ. ತಿರುಮಲ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ   ಕಾರ್ಯಕ್ರಮದ ಸರ್ವಾಧ್ಯಕ್ಷತೆ ವಹಿಸಿದ ಡಾ. ರಮೇಶ ಮಹದೇವಪ್ಪನವರ   (Hubli) ಹುಬ್ಬಳ್ಳಿ : ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ ಹುಬ್ಬಳ್ಳಿಯ ಮೂರು ಸಾವಿರ ಮಠದ ವಿದ್ಯಾವರ್ಧಕ ಸಭಾಂಗಣದಲ್ಲಿ ನಡೆದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ–2026 ಕಾರ್ಯಕ್ರಮದಲ್ಲಿ ಪತ್ರಕರ್ತರು, ಶಿಕ್ಷಣ ಸೇವಾಕರ್ತರು ಹಾಗೂ ಸಮಾಜ ಸೇವಕರಾದ ಆನಂದ್ ಸಿ. ತಿರುಮಲ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ–2026 ಪ್ರದಾನ ಮಾಡಿ […]

(Hubli) ಹುಬ್ಬಳ್ಳಿ : ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ ಹುಬ್ಬಳ್ಳಿಯ ಮೂರು ಸಾವಿರ ಮಠದ ವಿದ್ಯಾವರ್ಧಕ ಸಭಾಂಗಣದಲ್ಲಿ ನಡೆದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ–2026 ಕಾರ್ಯಕ್ರಮದಲ್ಲಿ ಪತ್ರಕರ್ತರು, ಶಿಕ್ಷಣ ಸೇವಾಕರ್ತರು ಹಾಗೂ ಸಮಾಜ ಸೇವಕರಾದ ಆನಂದ್ ಸಿ. ತಿರುಮಲ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ–2026 ಪ್ರದಾನ ಮಾಡಿ ಗೌರವಿಸಲಾಯಿತು.

  ಪತ್ರಿಕೋದ್ಯಮ, ಶಿಕ್ಷಣ, ಸಾಹಿತ್ಯ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

  ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಡಾ. ರಮೇಶ ಮಹದೇವಪ್ಪನವರ ವಹಿಸಿದ್ದರು.

  ಡಾ. ಶಾಂತಣ್ಣ ವಾಯ್. ಕಡಿವಾಳ ಉದ್ಘಾಟಿಸಿದರು. ರಾಜೇಂದ್ರ ವಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

  ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಆನಂದ್ ಸಿ. ತಿರುಮಲ, ಈ ಪ್ರಶಸ್ತಿ ನನ್ನ ಸೇವಾ ಪಯಣದಲ್ಲಿ ಸಹಕರಿಸಿದ ಎಲ್ಲರಿಗೂ ಸಲ್ಲುತ್ತದೆ. ಪ್ರಶಸ್ತಿಗಳು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಮುಂದಿನ ದಿನಗಳಲ್ಲಿಯೂ ಕನ್ನಡ ನಾಡು, ನುಡಿ, ಸಂಸ್ಕೃತಿ, ಶಿಕ್ಷಣ ಹಾಗೂ ಸಮಾಜದ ಹಿತಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದರು.

  ಆನಂದ್ ಸಿ. ತಿರುಮಲ ಅವರು ಎನ್.ಇ.ಟಿ. ಎಜುಕೇಶನ್ ಅಕಾಡೆಮಿ, ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಾಗಿ, ಪತ್ರಕರ್ತರಾಗಿ, ಕವಿಯಾಗಿ ಹಾಗೂ ಲೇಖಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

  ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವೀರ ಕನ್ನಡಿಗ ಪ್ರಶಸ್ತಿ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಹಾಗೂ ಬಾಲ ಪ್ರತಿಭೆಗಳಿಗೆ ಸಿರಿಗನ್ನಡ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

   ಟ್ರಸ್ಟ್‌ನ ರಾಜ್ಯಾಧ್ಯಕ್ಷ ರೋ. ಡಾ. ಜಿ. ಶಿವಣ್ಣ, ಪ್ರಧಾನ ಕಾರ್ಯದರ್ಶಿ ಸಂಗೀತಾ ಮಠಪತಿ, ಡಾ. ಶಿವಕುಮಾರ್ ಸೇರಿದಂತೆ ಗಣ್ಯರು, ಸಾಹಿತಿಗಳು, ಕಲಾವಿದರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.