ಮೂಡಬಿದ್ರಿ : ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು (ಎಐಇಟಿ) ಈಚೆಗೆ ಒಡಂಬಡಿಕೆಗೆ ಸಹಿ ಮಾಡಿದೆ.
ವಿವಿಧ ತರಬೇತಿ ಕಾರ್ಯಕ್ರಮಗಳ ಅಡಿಯಲ್ಲಿ ಕೌಶಲ ಅಭಿವೃದ್ಧಿ ತರಬೇತಿಯನ್ನು ನೀಡಲು ಈ ಒಪ್ಪಂದವನ್ನು ಮಾಡಲಾಗಿದೆ.
ಯುವಕರ ಎಂಜಿನಿಯರಿಂಗ್ ಕೌಶಲಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವ ಆಶಯವನ್ನು ಈ ಒಪ್ಪಂದ ಒಳಗೊಂಡಿದೆ.
ಕೆಜಿಟಿಟಿಐ ಮಂಗಳೂರಿನ ನಿರ್ದೇಶಕ ಗಿರಿಧರ್ ಸಾಲಿಯಾನ್ ಅವರ ಸಮ್ಮುಖದಲ್ಲಿ ಈ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು.
ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಮತ್ತು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ, ಸಹಾಯಕ ಪ್ರಾದ್ಯಾಪಕ ಹೇಮಂತ್ ಸುವರ್ಣ ಇದ್ದರು.

