ಇನ್ನಂಜೆಯಲ್ಲಿ “ಮೊಸರು ಕುಡಿಕೆ ಕ್ರೀಡಾಕೂಟ – 2025 ಮುದ್ದುಕೃಷ್ಣ ವೇಷ ಸ್ಪರ್ಧೆ”
ಕಾರ್ಯಕ್ರಮ ಉದ್ಘಾಟಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ
(Kaup) ಕಾಪು : ಇನ್ನಂಜೆ ಯುವಕ ಮಂಡಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ, ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ ಪಾದೆಕೆರೆ ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಮಹಿಳಾ ಮಂಡಳಿ ಇವರ ಆಯೋಜನೆಯಲ್ಲಿ ಸೋಮವಾರ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ “ಮೊಸರು ಕುಡಿಕೆ ಕ್ರೀಡಾಕೂಟ – 2025 ಮುದ್ದುಕೃಷ್ಣ ವೇಷ ಸ್ಪರ್ಧೆ” ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ನಿರ್ದೇಶಕ ನಾಗರಾಜ್ ಶೆಟ್ಟಿ, ಕಾಪು ಯೋಜನಾಧಿಕಾರಿ ಮಮತಾ ಶೆಟ್ಟಿ, ಎಸ್.ವಿ.ಯಚ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು, ಇನ್ನಂಜೆ ಯುವಕ ಮಂಡಲದ ಅಧ್ಯಕ್ಷ ವಜ್ರೇಶ್ ಅಚಾರ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

