# Tags
#CONGARTULATIONS #ವಿಡಿಯೋ

ಈಶಾನ್ಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ (Kaup Hosa marigudi felicitates the youth of Kaup who went on a study tour to North Eastern States)

 ಈಶಾನ್ಯ ರಾಜ್ಯಗಳಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದ ಕಾಪುವಿನ ಯುವಕರಿಗೆ ಕಾಪು ಹೊಸ ಮಾರಿಗುಡಿಯಲ್ಲಿ ಅಭಿನಂದನೆ  

(Kaup) ಕಾಪು : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ಶಟರ್ ಬಾಕ್ಸ್ ಖ್ಯಾತಿಯ ಕಾಪುವಿನ ಸಚಿನ್ ಶೆಟ್ಟಿ ಮತ್ತು ಅಭಿಷೇಕ್ ಶೆಟ್ಟಿ ತಂಡ ಕರಾವಳಿಯ ಪ್ರವಾಸೋದ್ಯಮ, ಧಾರ್ಮಿಕ ಮತ್ತು ವಿಶೇಷವಾಗಿ ಉತ್ತರ ಭಾರತದ ಮೇಘಾಲಯ, ಮಿಝೋರಾಂ, ಒಡಿಶಾ ಸಹಿತ 7 ರಾಜ್ಯಗಳ ಪ್ರವಾಸ ಕೈಗೊಂಡು ಕಲೆ ಸಂಸ್ಕೃತಿ ಆಹಾರದ ಅಧ್ಯಯನ ನಡೆಸಿ ಪರಂಪರೆಯನ್ನು ಎಲ್ಲೆಡೆ ಪ್ರಚುರಗೊಳಿಸುವ ಉದ್ದೇಶದೊಂದಿಗೆ ಸುಜುಕಿ ಜಿಮ್ಮಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ ಕಳೆ ಅ. 5ರಂದು ಪ್ರವಾಸ ಹೊರಟಿದ್ದು, ಇಂದು 53 ದಿನಗಳ ಪ್ರವಾಸ ಮುಗಿಸಿ ಕಾಪುವಿಗೆ ಆಗಮಿಸಿದ್ದಾರೆ.

   ಕಾಪುವಿಗೆ ಆಗಮಿಸಿದ ಸಚಿನ್ ಶೆಟ್ಟಿ ಮತ್ತು ಅವರ ತಂಡವನ್ನು ಕಾಪು ಹೊಸ ಮಾರಿಗುಡಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ ಸ್ವಾಗತಿಸಿದರು.

 ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ಶ್ರೀ ದೇವಿಗೆ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದರು.

ಇದೇ ಸಂದರ್ಭ ಆಡಳಿತ ಮಂಡಳಿಯ ವತಿಯಿಂದ ಸಚಿನ್ ಮತ್ತು ತಂಡವನ್ನು ಸನ್ಮಾನಿಸಲಾಯಿತು.

ಮಾಧ್ಯಮದೊಂದಿಗೆ ಸಚಿನ್‌ ಶೆಟ್ಟಿ ಮಾತನಾಡಿ, ನಾವು ಅಕ್ಟೋಬರ್‌ 5ರಂದು ಕಾಪು ಶ್ರೀ ಹೊಸಮಾರಿ ಗುಡಿಯಿಂದ ಕರ್ನಾಟಕ, ಆಂಧ್ಯಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರ, ಮಿಝಾರಾಮ್, ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಈಶಾನ್ಯ ರಾಜ್ಯಗಳ ಅಧ್ಯಯನ ಪ್ರವಾಸ ಮಾಡಿ 53 ದಿನಗಳ ನಂತರ ಕಾಪುವಿಗೆ ಆಗಮಿಸಿದ್ದೇವೆ.

ನಾವು ಪ್ರವಾಸದ ವೇಳೆ ವಿಡಿಯೋ ತುಣುಕನ್ನು ನನ್ನ  ಶಟರ್‌ಬಾಕ್ಸ್ ಯುಟ್ಯೂಬ್  ಚಾನೆಲ್‌ನಲ್ಲಿ ಪ್ರಸಾರ ಮಾಡುವ ಮೂಲಕ ಜನರಿಗೆ ವಿವಿಧ ರಾಜ್ಯಗಳ ಮಾಹಿತಿ ನೀಡಿದ್ದೇನೆ. ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರದ ಬಗ್ಗೆ ಎಲ್ಲಾ ಕಡೆ ಮಾಹಿತಿ ನೀಡಿದ್ದೇನೆ.

ನಮ್ಮ ತಂಡದಲ್ಲಿ ಅಭಿಷೇಕ್, ಸಾಯಿ ಸಹಿತ ನಾಲ್ವರೊಂದಿಗೆ ಪ್ರವಾಸ ಕೈಗೊಂಡಿದೇವೆ. ನಮ್ಮ ಪ್ರವಾಸಕ್ಕೆ 8 ಜನರು ಪ್ರಾಯೋಜಕತ್ವ ನೀಡಿದ್ದರು ಎಂದೂ ಸಚಿನ್‌ ಶೆಟ್ಟಿ ಹೇಳಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2