• Home  
  • ಉಚ್ಚಿಲದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ (‘Pancha Guarantee’ Celebration in Uchila)
- ರಾಜಕೀಯ

ಉಚ್ಚಿಲದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ (‘Pancha Guarantee’ Celebration in Uchila)

Share: ಉಚ್ಚಿಲದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಗ್ಯಾರಂಟಿ ಯೋಜನೆಗಳಿಂದ ಕುಟುಂಬ ಸದೃಡ: ಮಾಜಿ ಸಚಿವ ಸೊರಕೆ  (Uchila) ಉಚ್ಚಿಲ : ಉಚ್ಚಿಲ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಉಚ್ಚಿಲದಲ್ಲಿ ನಡೆದ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಭಾನುವಾರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಯಿತು.    ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಈ ಸಂದರ್ಭ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಈ ಯೋಜನೆಗಳ ಮೂಲಕ ಆರ್ಥಿಕ ಸದೃಢರನ್ನಾಗಿಸಲು ಸಹಕಾರಿಯಾಗುತ್ತದೆ […]

 (Uchila) ಉಚ್ಚಿಲ : ಉಚ್ಚಿಲ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಉಚ್ಚಿಲದಲ್ಲಿ ನಡೆದ ಪಂಚ ಗ್ಯಾರಂಟಿ ಸಂಭ್ರಮೋತ್ಸವ ಭಾನುವಾರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಯಿತು.

   ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ಈ ಸಂದರ್ಭ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಈ ಯೋಜನೆಗಳ ಮೂಲಕ ಆರ್ಥಿಕ ಸದೃಢರನ್ನಾಗಿಸಲು ಸಹಕಾರಿಯಾಗುತ್ತದೆ ಎಂದರು.

ಮುಖ್ಯ ಅತಿಥಿ ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಕೇವಲ ಬಿಟ್ಟಿ ಭಾಗ್ಯ ನೀಡುವ ಯೋಜನೆಗಳಲ್ಲ. ಬದಲಾಗಿ ಬಡವರು, ಮಧ್ಯಮ ವರ್ಗದವರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಜೀವನಮಟ್ಟ ಸುಧಾರಿಸುವ, ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡುವ ಮತ್ತು ಸ್ವಾವಲಂಬಿ ಬದುಕಿಗೆ ಶಕ್ತಿ ತುಂಬುವ ಜನಪರ ಯೋಜನೆಗಳಾಗಿವೆ ಎಂದು ಮುರೋಳಿ ಹೇಳಿದರು.

  ಗ್ರಾಮೀಣ ಕಾಂಗ್ರೆಸ್ ಸಮಿತಿ ಉಚ್ಚಿಲ ಸುಕುಮಾರ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಮೆಸ್ಕಾಂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

  ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಅಡ್ವೆ, ಕೆಪಿಸಿಸಿ ಸಂಯೋಜಕರಾದ ನವೀನ್‌ಚಂದ್ರ ಜೆ .ಶೆಟ್ಟಿ, ಹರಿಪ್ರಸಾದ್ ರೈ, ಅಬ್ದುಲ್ ಅಝೀಝ್ ಹೆಜಮಾಡಿ, ದೀಪಕ್ ಎರ್ಮಾಳು, ಯು.ಸಿ ಶೇಖಬ್ಬ, ಗಣೇಶ್ ಆಚಾರ್ಯ ಉಚ್ಚಿಲ, ಧೀರಜ್ ಹುಸೈನ್, ಅಶೋಕ್ ಸಾಲ್ಯಾನ್, ರಿಯಾಜ್ ಮುದರಂಗಡಿ, ಫಾರೂಕ್ ಚಂದ್ರನಗರ, ದೀವ್ ರಫೀಕ್, ಸತೀಶ್ ದೇಜಾಡಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಹಸನ್ ಬಾವಾ, ಕೀರ್ತಿ ಕುಮಾರ್, ರೀನಾ ವಿನೂತಾ ಡಿಸೋಜ, ರಶ್ಮಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.

   ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರ್ವಹಿಸಿದರು. ಸುಧಾಕರ ಕೆ. ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.