ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ
(Uchila)ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಾಗೂ ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಸೋಮವಾರ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿಗಳಿಂದ ಜಾಥ ನಡೆಯಿತು.
ಜಾಥವು ಉಚ್ಚಿಲ ಸರಸ್ವತಿ ಮಂದಿರ ಶಾಲೆಯಿಂದ ಉಚ್ಚಿಲ ಬಡಾ ಗ್ರಾಮ ಪಂಚಾಯತ್‌ವರೆಗೆ ನಡೆಯಿತು.
ಉಚ್ಚಿಲ ಪೇಟೆಯಲ್ಲಿ ಪಡುಬಿದ್ರಿ ಠಾಣಾ ಸಿಬ್ಬಂದಿ ಯೋಗೀಶ್ ರವರು ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಅಪರಾಧ ತಡೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಉಚ್ಚಿಲ ಸರಸ್ವತಿ ಮಂದಿರ ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಎಸ್ ಆಚಾರ್ಯ ಹಾಗೂ ಶಿಕ್ಷಕ ವೃಂದ, ಪಡುಬಿದ್ರಿ ಪೊಲೀಸ್ ಠಾಣಾ ಸಿಬ್ಬಂದಿಗಳು, ಉಚ್ಚಿಲ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಸಿರಾಜ್ ಉಚ್ಚಿಲ ಮತ್ತು ಸದಸ್ಯರು, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

