• Home  
  • ಉಚ್ಚಿಲ : ಡಾ. ಜಿ.ಶಂಕ‌ರ್ ಅವರ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ (Uchila: Massive voluntary blood donation camp organized by various organizations to mark Dr. G. Shankar’s birthday.)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ - ಸಹಾಯ ಹಸ್ತ

ಉಚ್ಚಿಲ : ಡಾ. ಜಿ.ಶಂಕ‌ರ್ ಅವರ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ (Uchila: Massive voluntary blood donation camp organized by various organizations to mark Dr. G. Shankar’s birthday.)

Share: ಉಚ್ಚಿಲ : ಡಾ. ಜಿ.ಶಂಕ‌ರ್ ಅವರ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ   ಶಿಬಿರ ಉದ್ಘಾಟಿಸಿದ ಜಿ ಶಂಕ‌ರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ (Padubidri) ಪಡುಬಿದ್ರಿ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟ್   ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ದ.ಕ. ಮೊಗವೀರ ಮಹಿಳಾ ಸಂಘ ಉಚ್ಚಿಲ, ಕಾಪು ನಾಲ್ಕುಪಟ್ಣ […]

(Padubidri) ಪಡುಬಿದ್ರಿ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟ್   ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ದ.ಕ. ಮೊಗವೀರ ಮಹಿಳಾ ಸಂಘ ಉಚ್ಚಿಲ, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ, ಕಾಪು ನಾಲ್ಕುಪಟ್ಣ ಮೊಗವೀರ ಮಹಿಳಾ ಒಕ್ಕೂಟ ಉಚ್ಚಿಲ, ಕರಾವಳಿ ಯುವಕ-ಯುವತಿ ವೃಂದ ಹೆಜಮಾಡಿ, ಕರಾವಳಿ ಫ್ರೆಂಡ್ಸ್ ಉಚ್ಚಿಲ, ಟೀಂ ಮಾರುತಿ ಮೂಳೂರು, ರಕ್ತನಿಧಿ ಕೆ.ಎಮ್.ಸಿ. ಮಣಿಪಾಲ, ರಕ್ತನಿಧಿ ಜಿಲ್ಲಾಸ್ಪತ್ರೆ ಉಡುಪಿ ಜಿಲ್ಲೆ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ನಾಡೋಜ ಡಾ. ಜಿ.ಶಂಕ‌ರ್ ಅವರ ಜನ್ಮದಿನದ ಪ್ರಯುಕ್ತ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವು ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಜರಗಿತು.

 ಕಾರ್ಯಕ್ರಮವನ್ನು ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಿದರು.

  ಈ ಸಂದರ್ಭ ಮಾತನಾಡಿದ ಅವರು, ಒಂದು ಯುನಿಟ್ ರಕ್ತದಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಎಲ್ಲಾ ಸಮಾಜದ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುವುದು ನನ್ನ ಉದ್ದೇಶವಾಗಿದೆ. ದುಡ್ಡು ಮುಖ್ಯವಲ್ಲ ಜನರ ಪ್ರೀತಿ ಮುಖ್ಯ. ಮಾಡಿದ ಕೆಲಸಗಳು ಶಾಶ್ವತ, ಟೀಕೆಗಳಿಗೆ ಹೆದರದೆ ಕೆಲಸ ನಿರ್ವಹಿಸಬೇಕು. ಜೀವನದಲ್ಲಿ ಸಮಾಜ ಸೇವೆಯು ಮುಖ್ಯವಾಗಿದೆ. ಜನ್ಮ ದಿನದ ಪ್ರಯುಕ್ತ ನಡೆಯುತ್ತಿರುವ ರಕ್ತದಾನ ಶಿಬಿರದಿಂದ ಮನಸ್ಸು ತುಂಬಿದೆ ಎಂದರು.

  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ರಕ್ತವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಪಡೆಯಬಹುದು. ರಕ್ತದಾನ ಕಾರ್ಯಕ್ರಮ ಅರ್ಥಪೂರ್ಣ ಕಾರ್ಯವಾಗಿದೆ. ಜಿ. ಶಂಕರ್ ನೇತೃತ್ವದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಪ್ರತಿವರ್ಷ 1.5 ಕೋಟಿ ರೂ. ನೀಡಲಾಗುತ್ತಿದೆ. ಅವರ ಸೇವೆಗೆ ಭಗವಂತನ ಆಶೀರ್ವಾದವಿರಲಿ‌ ಎಂದು ಶುಭ ಹಾರೈಸಿದರು.

  ಪ್ರಾಸ್ತಾವಿಕವಾಗಿ ಮಾತನಾಡಿದ ಮೊಗವೀರ ಯುವ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾದ ರವೀಶ್ ಎಸ್. ಕೊರವಡಿ ಮಾತನಾಡಿ, ಮೊಗವೀರ ಸಂಘಟನೆಗಳ ಪ್ರೇರಣಾ ಶಕ್ತಿ ನಾಡೋಜ ಡಾ. ಜಿ.ಶಂಕರ್. ಅವರ ನೇತೃತ್ವದಲ್ಲಿ 17 ವರ್ಷಗಳಿಂದ  ರಕ್ತದಾನ ಆಯೋಜಿಸಿ 1 ಲಕ್ಷ 24 ಸಾವಿರ 650 ಯುನಿಟ್ ರಕ್ತ ಸಂಗ್ರಹಿಸಲಾಗಿದೆ. ಇದರ ಜೊತೆಗೆ ಅವರ ಜನ್ಮ ದಿನಾಚರಣೆಯ ಅಂಗವಾಗಿ 430 ಕ್ಕೂ ಅಧಿಕ ಉಡುಪಿ ಮತ್ತು ದ.ಕ. ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೆ ಧನಸಹಾಯ ನೀಡಲಾಗಿದೆ. ಇದಲ್ಲದೆ ವಿಕಲ ಚೇತನರಿಗೆ, ಕಿಡ್ನಿ ರೋಗಿಗಳಿಗೆ, ಧಾರ್ಮಿಕ ಕ್ಷೇತ್ರಗಳಿಗೆ,  ಕಲಾವಿದರಿಗೆ, ವೃದ್ಧಾಶ್ರಮಗಳಿಗೆ ನೆರವು ನೀಡಲಾಗಿದೆ ಎಂದರು.

  ಕೆ.ಎಂ.ಸಿ ರಕ್ತನಿಧಿಯ ಡಾ. ಶಮೀ ಶಾಸ್ತ್ರಿ ಮಾತನಾಡಿ, ನಾಡೋಜ‌ ಡಾ. ಜಿ‌. ಶಂಕರ್ ಅವರ ಸೇವೆ ಶ್ಲಾಘನೀಯವಾಗಿದೆ. ರಕ್ತದಾನ ಮಾಡಲು ಹಿಂಜರಿಯುತ್ತಿದ್ದ ಕಾಲದಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಡಾ. ಜಿ. ಶಂಕರ್ ನೇತೃತ್ವದಲ್ಲಿ ಮೊಗವೀರ ಯುವ ಸಂಘಟನೆ ಕ್ರಾಂತಿಯನ್ನೇ ಮಾಡಿದೆ. ಉಡುಪಿ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನಗಳಿಸುವಂತಾಗಿದೆ‌. ಅತ್ಯಂತ ವಿರಳವಾದ ರಕ್ತದಾನಿಗಳ ಸಂಘಟನೆಯ ಅವಶ್ಯಕತೆಯಿದೆ ಆ ಮೂಲಕ ಅವರ ಜೀವವನ್ನು ಉಳಿಸಬಹುದು ಎಂದರು.

  ಬಗ್ವಾಡಿ ಹೋಬಳಿಯ‌ ಅಧ್ಯಕ್ಷ ಉದಯ್ ಕುಮಾರ್ ಹಟ್ಟಿಯಂಗಡಿ, ಬಾರ್ಕೂರು ಸಂಯುಕ್ತ ಸಭಾದ ಅಧ್ಯಕ್ಷ ಸತೀಶ್ ಅಮೀನ್ ಬಾರ್ಕೂರು, ಮೊಗವೀರ ಯುವ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ರವೀಶ್ ಎಸ್. ಕೊರವಡಿ, ದ. ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಗೌರವ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್ ಮಲ್ಪೆ, ಮೊಗವೀರ ಯುವ ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ಜಯಂತ್ ಅಮೀನ್ ಕೋಡಿ, ಬಗ್ವಾಡಿ ಹೋಬಳಿಯ‌ ಅಧ್ಯಕ್ಷ ಉದಯ್ ಕುಮಾರ್ ಹಟ್ಟಿಯಂಗಡಿ, ಬಾರ್ಕೂರು ಸಂಯುಕ್ತ ಸಭಾದ ಅಧ್ಯಕ್ಷ ಸತೀಶ್ ಅಮೀನ್ ಬಾರ್ಕೂರು, ದ. ಕ. ಮೊಗವೀರ ಮಹಾಜನ ಮಹಿಳಾ ಸಂಘದ ಅಧ್ಯಕ್ಷೆ ಕವಿತಾ ಶರತ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಗುಣಾ ಎಸ್. ಕರ್ಕೇರ, ಕರಾವಳಿ ಯುವಕ-ಯುವತಿ ವೃಂದದ ಅಧ್ಯಕ್ಷ ಎಸ್. ದಿವಾಕರ ಹೆಜಮಾಡಿ, ಹೆಜಮಾಡಿ ಕರಾವಳಿ ಯುವತಿ ವೃಂದದ ಅಧ್ಯಕ್ಷೆ ರೂಪಾ ಹೇಮಾನಂದ್ ಪುತ್ರನ್, ಕರಾವಳಿ ಫ್ರೆಂಡ್ಸ್ ಉಚ್ಚಿಲ ಅಧ್ಯಕ್ಷ ರಿತೇಶ್ ಸುವರ್ಣ, ಟೀಂ ಮಾರುತಿ ಮೂಳೂರು  ಅಧ್ಯಕ್ಷ ಪ್ರಹಾರ್ ಮೂಳೂರು, ರಕ್ತನಿಧಿ ಜಿಲ್ಲಾಸ್ಪತ್ರೆ ಅಜ್ಜರಕಾಡು ಉಡುಪಿಯ ವೈದ್ಯಕೀಯ ನಿರ್ದೇಶಕಿ ಡಾ. ವೀಣಾ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

  ದ.ಕ.ಮೊಗವೀರ ಮಹಾಜನ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ಸ್ವಾಗತಿಸಿದರು. ಮೊಗವೀರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶೇಖರ್ ತೋಳಾರ್ ವಂದಿಸಿದರು. ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಶೋಕ್ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ರಕ್ತದಾನ ಶಿಬಿರದಿಂದ ಒಟ್ಟು 257 ಯುನಿಟ್ ರಕ್ತ ಸಂಗ್ರಹ ಮಾಡಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.