ಉಚ್ಚಿಲ ದಸರಾ – 2024 ಆಮಂತ್ರಣ ಪತ್ರಿಕೆ ಬಿಡುಗಡೆ
(Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ “ಉಚ್ಚಿಲ ದಸರಾ -2024” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಾಂಗಣದಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು.
ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಮೊದಲಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ನಾಡೋಜ ಡಾ.ಜಿ. ಶಂಕರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರಾ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರಾ ಅಕ್ಟೋಬರ್ 3 ರಿಂದ ಅಕ್ಟೋಬರ್ 12ರವರೆಗೆ ನಡೆಯಲಿದ್ದು, ನೃತ್ಯ ವೈವಿಧ್ಯ , ದೇಹದಾಢ್ಯಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ. ಸರ್ವರೂ ಸಹಕರಿಸಬೇಕೆಂದು ಮನವಿ ಮಾಡಿದರು.
ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ
ಮಾತನಾಡಿ, ಸರ್ವರ ಸಹಕಾರದಿಂದ ಉಚ್ಚಿಲ ದಸರಾ -2024 ಆಚರಿಸಲಾಗುತ್ತಿದೆ. ತನು, ಮನ, ದನದಿಂದ ಎಲ್ಲರೂ ಸಹಕರಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದರು.
ಈ ಸಂದರ್ಭ ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ ಕುಂದರ್, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಇದರ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ವಿನಯ ಕರ್ಕೆರ ಮಲ್ಪೆ, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡುಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ದೇವಳದ ಪ್ರಧಾನ ಪ್ರಬಂಧಕ ಸತೀಷ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.
