ಉಚ್ಚಿಲ: ಪಾದಚಾರಿಗೆ ಬೈಕ್ ಡಿಕ್ಕಿ, ವಯೋವೃದ್ದ ಸಾವು
ಪಣಿಯೂರು ಸೆಂಟರ್ ನಿವಾಸಿ ಸದಾಶಿವ ಕೋಟ್ಯಾನ್ ಮೃತರು
(Uchila) ಉಚ್ಚಿಲ : ರಸ್ತೆ ದಾಟುತ್ತಿದ್ದ ವಯೋವೃದ್ದರಿಗೆ ಬೈಕೊಂದು ಡಿಕ್ಕಿ ಹೊಡೆದು ಅವರು ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ವೇಗಧೂತ ಬಸ್ಸು ನಿಲ್ದಾಣದ ಬಳಿ ಘಟಿಸಿದೆ.
ಮೃತ ಪಾದಚಾರಿಯವರನ್ನು ಪಣಿಯೂರು ಸೆಂಟರ್ ನಿವಾಸಿ ಸದಾಶಿವ ಕೋಟ್ಯಾನ್ (೬೫) ಎಂದುಗುರುತಿಸಲಾಗಿದೆ.
ಅವರು ರಸ್ತೆ ದಾಟುತ್ತಿದ್ದಾಗ, ಪಡುಬಿದ್ರಿ ಕಡೆಯಿಂದ ಕಾಪು ಕಡೆಗೆ ಸಾಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಎಸ್ಡಿಪಿಐ ಆಂಬುಲೆನ್ಸ್ ಮೂಲಕ ಸಮಾಜ ಸೇವಕ ಜಲಾಲುದ್ದೀನ್ ಮತ್ತು ಹಮೀದ್ ರವರು ಉಡುಪಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿಯ ವೈದ್ಯರು ಮೃತ ಘೋಷಿಸಿದ್ದಾರೆ.
ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಮೃತರು ಮೂಳೂರಿನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಯಿಂದ ಹೊಟೇಲಿಗೆ ಬರುತ್ತಿದ್ದಾಗ, ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪಡುಬಿದ್ರಿ ಪೋಲಿಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

