• Home  
  • ಉಚ್ಚಿಲ ಪೊಲ್ಯ ರಸ್ತೆ ರಿಪೇರಿಗೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ (SDPI protests demanding repair of Uchchila Polya road)
- PROBLEMS

ಉಚ್ಚಿಲ ಪೊಲ್ಯ ರಸ್ತೆ ರಿಪೇರಿಗೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ (SDPI protests demanding repair of Uchchila Polya road)

Share: ಉಚ್ಚಿಲ ಪೊಲ್ಯ ರಸ್ತೆ ರಿಪೇರಿಗೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ ಹಲವಾರು ಬಾರಿ ಗ್ರಾ.ಪಂಗೆ ಮನವಿ ಮಾಡಿದ್ದರೂ ಫಲ ಶೂನ್ಯ.  (Uchila) ಉಚ್ಚಿಲ : ಉಚ್ಚಿಲ ಬಡಾ ಗ್ರಾಮದ 2 ನೇ ವಾರ್ಡಿನ ಪೊಲ್ಯ – ಹೆದ್ದಾರಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಗುರುವಾರ ಸಂಜೆ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು.  ಕಳೆದ ಎರಡು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ […]

 (Uchila) ಉಚ್ಚಿಲ : ಉಚ್ಚಿಲ ಬಡಾ ಗ್ರಾಮದ 2 ನೇ ವಾರ್ಡಿನ ಪೊಲ್ಯ – ಹೆದ್ದಾರಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಗುರುವಾರ ಸಂಜೆ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು.

 ಕಳೆದ ಎರಡು ವರ್ಷಗಳಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯ ಸಂದರ್ಭಗಳಲ್ಲಿ ರಸ್ತೆಯಲ್ಲಿ ಗುಂಡಿಗಳು ಉಂಟಾಗಿ ನೀರು ನಿಂತ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 ರಸ್ತೆ ದುರಸ್ತಿಗೊಳಿಸುವಂತೆ ಸಂಸದರು ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರೂ, ಕೇವಲ ಭರವಸೆ ಮಾತ್ರ ಸಿಗುತ್ತಿದೆ. ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನೆಯನ್ನು ಉದ್ದೇಶಿಸಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ರಜಾಕ್ ವೈಎಸ್, ಮಾತನಾಡಿದರು.

 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಮನವಿ ಸ್ವೀಕರಿಸಿದರು.

  ಎಸ್‌ಡಿಪಿಐ ಕಾಪು ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ತೌಫಿಕ್ ಉಚ್ಚಿಲ, ಎಸ್‌ಡಿಪಿಐ ಕಾಪು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಹರ್ಷ ಇಬ್ರಾಹಿಂ, ಉಚ್ಚಿಲ ಗ್ರಾಮ ಸಮಿತಿ ಕಾರ್ಯದರ್ಶಿ ಆಸಿಫ್ ವೈಸಿ ಉಪಸ್ಥಿತರಿದ್ದರು. 

  ಗ್ರಾಮ ಸಮಿತಿ ಉಪಾಧ್ಯಕ್ಷ ಶರೀಫ್ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.