• Home  
  • ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Protest meeting held to condemn chaos on National Highway 66 in Uchilla)
- protest

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Protest meeting held to condemn chaos on National Highway 66 in Uchilla)

Share: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Uchila) ಉಚ್ಚಿಲ:  ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.  ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್  ಶಾಲೆಯ ಡಿವೈಡೆರ್ ತನಕ ಹೆದ್ದಾರಿ […]

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ

(Uchila) ಉಚ್ಚಿಲ:  ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.

 ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್  ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್  ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಜೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಕೆ ಇದೇ ಮುಂತಾದ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

 ಪ್ರತಿಭಟನಾ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಲಾಯಿತು.

 ಪ್ರತಿಭಟನಾ ಸಭೆಯಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಕಾಪು ತಹಸಿಲ್ದಾರ್ ಪ್ರತಿಭಾ ಆರ್, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಜಾವೇದ್ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ, ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಸಹಿತ ವಿವಿಧ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

 ಪ್ರತಿಭಟನಾ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ, ಯೋಗೀಶ್ ಶೆಟ್ಟಿ, ಶೇಖರ್ ಹೆಜಮಾಡಿ, ಎಂ.ಎ ಗಫರ್ ಸಹಿತ ಗಣ್ಯರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

 ಈ ಸಂದರ್ಭ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಜ್ ಉಚ್ಚಿಲ ಸಹಿತ ನೂರಾರು ಜನರು  ಉಪಸ್ಥಿತರಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.