• Home  
  • ಉಚ್ಚಿಲ ಶ್ರೀ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Udupi District Collector visits Uchila Shri Ganeshotsava)
- ಧಾರ್ಮಿಕ

ಉಚ್ಚಿಲ ಶ್ರೀ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Udupi District Collector visits Uchila Shri Ganeshotsava)

Share: ಉಚ್ಚಿಲ ಶ್ರೀ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ   ಕುಟುಂಬ ಸಮೇತರಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಕೆಟಿ (Uchila) ಉಚ್ಚಿಲ : ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಉಚ್ಚಿಲ ಆಯೋಜನೆಯ 38ನೇ ವರ್ಷ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಯವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಪ್ರಧಾನ ಅರ್ಚಕ ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯಿಂದ  ಶಾಲು ಹೊದಿಸಿ ಗೌರವಿಸಲಾಯಿತು. […]

(Uchila) ಉಚ್ಚಿಲ : ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಉಚ್ಚಿಲ ಆಯೋಜನೆಯ 38ನೇ ವರ್ಷ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಯವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

 ಪ್ರಧಾನ ಅರ್ಚಕ ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯಿಂದ  ಶಾಲು ಹೊದಿಸಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು  ಗಣೇಶೋತ್ಸವದ ಸಮಿತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಉಚ್ಚಿಲ, ಉಪಾಧ್ಯಕ್ಷ ದಿನೇಶ್ ಎರ್ಮಾಳ್, ಕಾರ್ಯದರ್ಶಿ ರವಿಕಿರಣ್‌, ಕೋಶಾಧಿಕಾರಿ ಕೆವಿ ವಿಷ್ಣುಮೂರ್ತಿ ಉಪಾಧ್ಯಾಯ, ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ದೇವಸ್ಥಾನದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.