ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ
(Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೋಮವಾರ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ದೇವಳದ ವತಿಯಿಂದ ವಿಶ್ವಜಿತ್ ಶೆಟ್ಟಿಯವರನ್ನು ಸ್ವಾಗತಿಸಲಾಯಿತು.
ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್‌ರವರು ದೇವಳದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿದರು.
ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಮಹಾಜನ ಸಂಘದ ಉಪಾಧ್ಯಕ್ಷ ದಿನೇಶ್ ಎರ್ಮಾಳು, ಮೋಹನ್ ಬಂಗೇರ ಕಾಪು, ರಾಘವೇಂದ್ರ ಸುವರ್ಣ ಬೈಕಾಡಿ, ಮನೋಹರ್ ಶೆಟ್ಟಿ ಸಾಯಿರಾಧ, ಸಂತೋಷ್ ಶೆಟ್ಟಿ, ಯೋಗೀಶ್ ಶೆಟ್ಟಿ, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ದೇವಳದ ಪ್ರಧಾನ ಪ್ರಬಂಧಕ ಸತೀಷ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.

