ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ಮೀನುಗಾರಿಕೆ, ಬಂದರು, ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವ ಮಾಂಕಾಳ ಎಸ್ ವೈದ್ಯರವರು ಭೇಟಿ ನೀಡಿದರು.
ದೇವಸ್ಥಾನದ ವತಿಯಿಂದ ಸಚಿವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ, ವಿಷ್ಣುಮೂರ್ತಿ ಉಪಾಧ್ಯಾಯ, ಶ್ರೀನಿವಾಸ ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವರಿಗೆ ಪ್ರಸಾದ ವಿತರಿಸಿದರು.
ಈ ಸಂದರ್ಭ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ದೇವಳದ ಪ್ರಬಂಧಕ ಸತೀಶ್ ಅಮೀನ್, ವಿಶ್ವಾಸ್ ಅಮೀನ್, ರಾಘವೇಂದ್ರ ಬೀಜಾಡಿ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

