• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Uchila Sri Mahalaxmi Temple Dhvajarohana)
- ಧಾರ್ಮಿಕ - ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Uchila Sri Mahalaxmi Temple Dhvajarohana)

Share: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.   ದೇವಳದ ರಥೋತ್ಸವ ಕಾರ್ಯಕ್ರಮ ಶನಿವಾರದಿಂದ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ. ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ ಋತ್ವಿಜರ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ

(Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಭಾನುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

  ದೇವಳದ ರಥೋತ್ಸವ ಕಾರ್ಯಕ್ರಮ ಶನಿವಾರದಿಂದ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ.

ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ ಋತ್ವಿಜರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಧ್ವಜಾರೋಹಣ ಕಾರ್ಯಕ್ರಮದ ವಿಧಿ ವಿಧಾನ ಸಂಪನ್ನಗೊಂಡಿತು.

ಈ ಸಂದರ್ಭ ಮೊಗವೀರ ಮುಂದಾಳು ಡಾ. ಜಿ ಶಂಕರ್ (Nadoja DR G Shankar), ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ(Jaya C Kotian), ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್(Gundu B Amin), ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲಿಯಾನ್‌ (Vasudeva Salian), ಉಪಾಧ್ಯಕ್ಷ ಸುಭಾಷ್ ಚಂದ್ರ ಕಾಂಚನ್, ಕಾರ್ಯದರ್ಶಿ ಸುಧಾಕರ್ ಕುಂದರ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಮನೋಜ್‌ ಕಾಂಚನ್‌, ಆನಂದ ಸಿ ಕುಂದರ್‌, ಗಂಗಾಧರ ಸುವರ್ಣ ಎರ್ಮಾಳು, ದಿನೇಶ್‌ ಎರ್ಮಾಳು, ಮೊಗವೀರ ಮಹಾಜನ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಉಷಾರಾಣಿ ಬೋಳೂರು, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಭಾದ ಅಧ್ಯಕ್ಷೆ ಶ್ರೀಮತಿ ಸುಗುಣ ಸುಕುಮಾರ್, ದೇವಸ್ಥಾನದ ಪ್ರಧಾನ ಮೆನೇಜರ್ ಸತೀಶ್ ಅಮೀನ್ ಸಹಿತ ಸಮಿತಿಯ ಸದಸ್ಯರು, ಮೊಗವೀರ ಮಹಾಜನ ಸಂಘದ ಸದಸ್ಯರು, ಸಹಿತ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.