ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ.
(Uchila) ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ಪೂಜೆ ಸಂಪನ್ನಗೊಂಡಿತು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ಋತ್ವಿಜರು ಪೂಜಾ ವಿಧಿ ವಿಧಾನ ನೆರವೇರಿಸಿದರು.
ನೂರಾರು ಮಹಿಳೆಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭ ಮೊಗವೀರ ಮುಂದಾಳು ನಾಡೋಜಾ ಡಾ. ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಸುಧಾಕರ್ ಕುಂದರ್, ಗುಂಡು ಅಮೀನ್, ವಾಸುದೇವ ಸಾಲ್ಯಾನ್, ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಉಷಾರಾಣಿ ಬೋಳೂರು, ನಾಲ್ಕು ಪಟ್ಣ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಕರ್ಕೆರ, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು.

