ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ (Uchila Shri Mahalaxmi Temple) ಮೊಗವೀರ್ಸ್ ಬಹರಿನ್ (Mogaveers Baharin) ವತಿಯಿಂದ ಪ್ರತಿಭಾ ಪುರಸ್ಕಾರ 2023
ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ಮೊಗವೀರ್ಸ್ ಬಹರಿನ್ ವತಿಯಿಂದ ಪ್ರತಿಭಾ ಪುರಸ್ಕಾರ 2023 (Scolorship)
ಉಚ್ಚಿಲ; ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಅನ ಛತ್ರ ಸಭಾಭವನದಲ್ಲಿ ಮೊಗವೀರ್ಸ್ ಬಹರಿನ್ ಸಂಸ್ಥೆಯ ವತಿಯಿಂದ ಪ್ರತಿಭಾ ಪುರಸ್ಕಾರ 2023 ಕಾರ್ಯಕ್ರಮವನ್ನು ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜಾ ಡಾ. ಜಿ ಶಂಕರ್ (Nadoja Dr. G Shankar) ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ಕೊಲ್ಲಿ ರಾಷ್ಟ್ರವಾದ ಬೆಹರಿನ್ ನಲ್ಲಿ ಕೆಲಸ ಮಾಡಿ, ಇಲ್ಲಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ. ಸಂಸ್ಥೆಯಿಂದ ಇನ್ನಷ್ಟು ಸಮಾಜಮುಖ ಕಾರ್ಯ ನಡೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉದ್ಯಮಿ ಮೋಹನ ಬೆಂಗ್ರೆ, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮೊಗವೀರ ಪತ್ರಿಕೆಯ ಸಂಪಾದಕ ಅಶೋಕ್ ಸುವರ್ಣ, ಮಹಾಜನ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಉಷಾರಾಣಿ, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಗುಣ ಕರ್ಕೇರಾ, ಶಿಲ್ಪ ಶಮಿತ್, ಸುಮನ ಸುವರ್ಣ, ವಿನೋದ್ ಶ್ರೀಯಾನ್ ಉಪಸ್ಥಿತರಿದ್ದರು.
ದೇವಳದ ಪ್ರಧಾನ ಪ್ರಬಂಧ ಸತೀಶ್ ಅಮೀನ್ ಪಡುಕರೆ ನಿರೂಪಿಸಿದರು.