ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ದಂಪತಿ ಭೇಟಿ (Former Union Minister Suresh prabhu couple visit Uchila Mahalaxmi Temple)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ದಂಪತಿ ಭೇಟಿ
(Uchila) ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ಹಾಗೂ ಶ್ರೀಮತಿ ಉಮಾ ಸುರೇಶ್ ಪ್ರಭುರವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಶ್ರೀ ಕ್ಷೇತ್ರದ ವತಿಯಿಂದ ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್ ರವರು ಶಾಲು ಹೊದಿಸಿ ಗೌರವಿಸಿದರು.
ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ದ.ಕ. ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಮಹಾಜನ ಸಂಘದ ಮಹಿಳಾ ಘಟಕಾಧ್ಯಕ್ಷೆ ಉಷಾರಾಣಿ ಬೋಳೂರು, ನಾಲ್ಕು ಪಟ್ಣ ಮೊಗವೀರ ಮಹಿಳಾ ಮಹಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಮೋಹನ್ ಬಂಗೇರ ಕಾಪು, ವೈ. ಗಂಗಾಧರ ಸುವರ್ಣ, ಮನೋಜ್ ಕಾಂಚನ್, ಸುಧಾಕರ್ ಸುವರ್ಣ, ಲಕ್ಷ್ಮಣ್ ಸುವರ್ಣ, ಬೇಬಿ ಎಚ್. ಸಾಲ್ಯಾನ್, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.