# Tags
#ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ (Deepothsava Celebration at Uchila Sri Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ

PHOTO CREDIT : SACHIN UCHILA

(Uchila) ಉಚ್ಚಿಲ: ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ನೆರವೇರಿತು.

  ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯರವರು ಪೂಜಾ ವಿಧಿ ವಿಧಾನ ಪೂರೈಸಿದ ಬಳಿಕ ದೀಪೋತ್ಸವ ಸಂಪನ್ನಗೊಂಡಿತು.

 ದೇವಳವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ದೇವಳದ ಸುತ್ತಲೂ ಹಚ್ಚಿದ ಹಣತೆಯ ದೀಪಾಲಂಕಾರ ನೋಡುಗರ ಕಣ್ಮನ ಸೆಳೆಯುವಂತಿತ್ತು.

  ದೀಪೋತ್ಸವದ ಪ್ರಯುಕ್ತ ಕೋದಂಡರಾಮ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ “ಸಾಕೇತ ಸಾಮ್ರಾಜ್ಞಿ”  ಎಂಬ ಯಕ್ಷಗಾನ ಬಯಲಾಟ ನೆರವೇರಿತು.

 ಈ ಸಂದರ್ಭ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ ಶಂಕರ್, ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ  ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ಆಡಳಿತ ಮಂಡಳಿಯ ಸದಸ್ಯರಾದ ರತ್ನಾಕರ ಸಾಲಿಯಾನ್, ಸುಧಾಕರ್ ಕುಂದರ್, ರವೀಂದ್ರ ಶ್ರೀಯಾನ್‌, ವಿಠಲ ಕರ್ಕೇರಾ, ಸತೀಶ್ ಸಾಲ್ಯಾನ್‌ ಎರ್ಮಾಳು, ನಾಲ್ಕು ಪಟ್ಣ ಮೊಗವೀರ  ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ  ಸುಗುಣ, ಗುಲಾಬಿ ಆರ್ ಕೋಟ್ಯಾನ್, ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕೆರೆ ಮತ್ತು ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2