• Home  
  • ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ (Mujurai, Transport Minister Ramalinga Reddy visit Uchila Sri Mahalakshmi Temple, pray)
- ಧಾರ್ಮಿಕ - ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ (Mujurai, Transport Minister Ramalinga Reddy visit Uchila Sri Mahalakshmi Temple, pray)

Share: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ    (Uchila) ಉಚ್ಚಿಲ:  ಮಹಾಜನಸಂಘ ಉಚ್ಚಿಲ ಸಂಚಾಲಿತಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ, ಇಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ […]

(Uchila) ಉಚ್ಚಿಲ:  ಮಹಾಜನಸಂಘ ಉಚ್ಚಿಲ ಸಂಚಾಲಿತಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ, ಇಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರಕಾರದ ವತಿಯಿಂದ ಸರ್ವ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

 ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ನಾಡೋಜ ಡಾ. ಜಿ. ಶಂಕರ್ ರವರು ಶಾಲು ಹೊದಿಸಿ ಗೌರವಿಸಿದರು.

ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,ಕಾಂಗ್ರೆಸ್ ಮುಖಂಡರುಗಳಾದ  ಪ್ರಸಾದ್ ರಾಜ್ ಕಾಂಚನ್, ಕಾಪು ದಿವಾಕರ್ ಶೆಟ್ಟಿ,ಮಹಾಜನ ಸಂಘದ ಉಪಾಧ್ಯಕ್ಷರಾದ ಮೋಹನ್ ಬೆಂಗ್ರೆ, ಗಿರಿಧರ್ ಸುವರ್ಣ, ಶರಣ್ ಕುಮಾರ್ ಮಟ್ಟು, ವಿನಯ್ ಕರ್ಕೇರ, ಗುಂಡು ಬಿ. ಅಮೀನ್, ರತ್ನಾಕರ್ ಸಾಲ್ಯಾನ್, ಸುಧಾಕರ್ ಕುಂದರ್, ಸುಜಿತ್ ಸಾಲ್ಯಾನ್, ಉಷಾರಾಣಿ ಬೋಳೂರು, ಸುಗುಣ ಕರ್ಕೇರ, ಕಿರಣ್ ಕುಮಾರ್ ಪಿತ್ರೋಡಿ, ಜಯಂತ್ ಅಮೀನ್ ಕೋಡಿ, ಶಂಕರ್ ಸಾಲ್ಯಾನ್ ಬಾರ್ಕೂರು ನಾರಾಯಣ ಕರ್ಕೇರ, ರಾಜೇಂದ್ರ ಸುವರ್ಣ ಹಿರಿಯಡ್ಕ, ಮೋಹನ್ ಬಂಗೇರ ಕಾಪು, ದೇವಳದ ಪ್ರಬಂಧಕ ಸತೀಷ್‌ ಅಮೀನ್ ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.