ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ : ದಸರಾ ವಿಗ್ರಹಗಳ ರಚನೆಗೆ ಮುಹೂರ್ತ
(Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆ ಗೆ ಭಕ್ತಾಭಿಮಾನಿಗಳ ಸಹಕಾರದಲ್ಲಿ ನಡೆಯಲಿರುವ 4ನೇ ವರ್ಷದ ಉಡುಪಿ -ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಶುಕ್ರವಾರ ಕ್ಷೇತ್ರದ ಪ್ರಧಾನ ಅರ್ಚಕರಾದ ಕೆ ವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಗುಂಡು ಬಿ. ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ್ ಕುಂದರ್, ಮೋಹನ್ ಬಂಗೇರ ಕಾಪು, ಪದ್ಮನಾಭ ಕೋಟ್ಯಾನ್, ವಿಗ್ರಹ ರಚನೆಗಾರರಾದ ಕುಬೇರ ಶಿವಮೊಗ್ಗ, ಎಂ.ಪಿ. ರಾಮ, ಲಾಲಾಜಿ ಕುಂದರ್, ಕ್ಷೇತ್ರದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಹಾಜರಿದ್ದರು.

