• Home  
  • ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Uchilla Saraswati Mandir School)
- ಕೃಷಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Uchilla Saraswati Mandir School)

Share: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಶಾಲಾ ಆವರಣಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ (Uchila) ಉಚ್ಚಿಲ : ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳಾದ  ಶ್ರೀಮತಿ ಅಶ್ವಿನಿ ಹಾಗೂ ಶ್ರೀಮತಿ ರಂಜಿತಾರವರು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.   ಎಲ್ಲರೂ ತಾಯಿಯ ಹೆಸರಲ್ಲಿ ಒಂದು ಗಿಡ ನೆಟ್ಟು ಪೂಜಿಸಬೇಕು. ಪರಿಸರದ ರಕ್ಷಣೆಯನ್ನು ನಾವು […]

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಶಾಲಾ ಆವರಣಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ

(Uchila) ಉಚ್ಚಿಲ : ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.

 ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳಾದ  ಶ್ರೀಮತಿ ಅಶ್ವಿನಿ ಹಾಗೂ ಶ್ರೀಮತಿ ರಂಜಿತಾರವರು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

  ಎಲ್ಲರೂ ತಾಯಿಯ ಹೆಸರಲ್ಲಿ ಒಂದು ಗಿಡ ನೆಟ್ಟು ಪೂಜಿಸಬೇಕು. ಪರಿಸರದ ರಕ್ಷಣೆಯನ್ನು ನಾವು ಮಾಡಬೇಕು. ಮುಂದಿನ ದಿನಗಳಲ್ಲಿ ಪರಿಸರದಲ್ಲಿ ಕಾರ್ಖಾನೆ ಗಳಿಂದ ಬರುವ ವಿಷ ಗಾಳಿಯಿಂದ ತುಂಬ ತೊಂದರೆಗೆ ಈಡಾಗುವ ಪರಿಸ್ಥಿತಿ ಎದುರಾಗಬಹುದು. ಹಾಗಾಗಿ ಪ್ರತಿಯೊಬ್ಬರೂ ಮನೆಯಲ್ಲಿ ಒಂದೊಂದು ಗಿಡವನ್ನು ಬೆಳೆಸಬೇಕು ಎಂದು ತಿಳಿ ಹೇಳಿದರು.

  ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ ಸ್ವಾಗತಿಸಿ ವಂದಿಸಿದರು.

 ಎಕೋ  ಕ್ಲಬ್ಬಿನ ನಿರ್ದೇಶಕ ಸದಾಶಿವ ನಾಯಕ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗೀತಾ ವೈ,  ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.