ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಶಿಕ್ಷಕರ ಸಮಸ್ಯೆ ಸಹಿತ ಹಲವಾರು ಸಮಸ್ಯೆಗಳಿದ್ದು, ಅದನ್ನು ಪರಿಹರಿಸುವಂತೆ ಶಾಲಾ ಸಂಚಾಲಕ ಗಂಗಾಧರ ಸುವರ್ಣ ರವರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಗಂಗಾಧರ ಸುವರ್ಣ ಮಾತನಾಡಿ, ಸರಕಾರವು ಕನ್ನಡ ಶಾಲೆ ಉಳಿಸಬೇಕೆಂದು ಪ್ರಯತ್ನ ಮಾಡುತ್ತಿರುವುದು ಉತ್ತಮ ಸಂಗತಿ. 2016ರಲ್ಲಿ ನಮ್ಮ ಶಿಕ್ಷಕಿಯ ಶಾಲೆಗೆ ರಾಜಿನಾಮೆ ಕೊಟ್ಟು ಹೋಗಿದ್ದಾರೆ. ಅಂದಿನಿಂದ ಇವರಿಗೆ ಅವರ ಜಾಗಕ್ಕೆ ನೂತನ ಶಿಕ್ಷಕರ ನೇಮಕ ಆಗಿಲ್ಲ. ಹಲವಾರು ಬಾರಿ ನಾವು ಸರ್ಕಾರಕ್ಕೆ ಮನವಿ ಮಾಡಿದ್ದೇವೆ.
ನಾವು ಶಾಲೆಯಲ್ಲಿ ಉಚಿತವಾಗಿ ಶಿಕ್ಷಣ ನೀಡುತ್ತಿದ್ದೇವೆ. ಶಾಲೆಯ ಮಾನ್ಯತೆ ನವೀಕರಣ ಮಾಡಲು ಸರಕಾರ ಹತ್ತು ಹಲವು ಮಾನದಂಡ ಹಾಕಿದ್ದು, ಅದಕ್ಕಾಗಿ ಹೆಚ್ಚಿನ ಹಣ ಭರಿಸಬೇಕಿದೆ. ಅದಕ್ಕೆ ಲಕ್ಷಾಂತರ ರುಪಾಯಿ ಎಲ್ಲಿಂದ ತರಬೇಕು. ಕನ್ನಡ ಶಾಲೆಯ ಸಮಸ್ಯೆ ಬಗೆಹರಿಸಲು ನಾವು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಇಂದು ಮನವಿ ಸಲ್ಲಿಸಿದ್ದೇವೆ ಎಂದರು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು ಬಾಬುರಾಯ ಆಚಾರ್ಯ ಉಪಸ್ಥಿತರಿದ್ದರು.

