ಉಚ್ಚಿಲ : ಸರಸ್ವತಿ ಮಂದಿರ ಶಾಲಾ ಪ್ರಾರಂಭೋತ್ಸವ, SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ
(Uchila) ಉಚ್ಚಿಲ: ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನೆರವೇರಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಈ ಸಂದರ್ಭ ಎಸ್ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‍್ಯಾಂಕ್, ಉಡುಪಿ ಜಿಲ್ಲಾ ಕನ್ನಡ ಮಾದ್ಯಮ ಶಾಲೆಗೆ ಪ್ರಥಮ ಸ್ಥಾನ ಪಡೆದ ಶಾಲಾ ವಿದ್ಯಾರ್ಥಿ ಸಮರ್ಥ್ ಆರ್ ಜೋಷಿಯವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಶ್ರೀಮತಿ ಶಿಲ್ಪಾ ಗಂಗಾಧರ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ವೈ, ಪ್ರೌಡ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾ ದಿನೇಶ್ ಸುವರ್ಣ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಕಲಾವತಿ ಆಚಾರ್ಯ, ಸಹ ಶಿಕ್ಷಕರು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ ಪ್ರಾಸ್ತಾವಿವಾಗಿ ಮಾತನಾಡಿ ಸ್ವಾಗತಿಸಿದರು.
ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮೀ ನಿರೂಪಿಸಿದರು. ದೈಹಿಕ ಶಿಕ್ಷಕ ಸುರೇಶ್ ಕುಲಾಲ್ ವಂದಿಸಿದರು.

