• Home  
  • ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Inaguration ceremony of of various Associations in Uchila Saraswati Mandira School)
- ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Inaguration ceremony of of various Associations in Uchila Saraswati Mandira School)

Share: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ನೆರವೇರಿತು. ಕುವೆಂಪು ಕನ್ನಡ ಸಂಘವನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ  ಕಾಪು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲಿಕ ಮರಾಠೆ ಚಾಲನೆ ನೀಡಿದರು.   ಸಿಎಸ್ಐ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಾಯ್ಸ್ ಶರ್ಲಿರವರು ವಿಜ್ಞಾನಿ ಸಿವಿ ರಾಮನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಶುಭ […]

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

(Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ನೆರವೇರಿತು.

ಕುವೆಂಪು ಕನ್ನಡ ಸಂಘವನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ  ಕಾಪು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲಿಕ ಮರಾಠೆ ಚಾಲನೆ ನೀಡಿದರು.

  ಸಿಎಸ್ಐ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಾಯ್ಸ್ ಶರ್ಲಿರವರು ವಿಜ್ಞಾನಿ ಸಿವಿ ರಾಮನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಶುಭ ಹಾರೈಸಿದರು.

 ಇದೇ ಸಂದರ್ಭ ಇಕೋ ಕ್ಲಬ್ ಕಬ್ಬಿನ ಉದ್ಘಾಟನೆಯನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ, ಕ್ರೀಡಾ ಸಂಘವನ್ನು ಹಾಕಿ ದಂತಕಥೆ ಧ್ಯಾನ್ ಚಂದ್ರ ಭಾವಚಿತ್ರವನ್ನು ಅನಾವರಣಗೊಳಿಸುವ ಮೂಲಕ,  ಸರಸ್ವತಿ ಗ್ರಾಹಕ ಸಂಘವನ್ನು ಉದ್ಘಾಟಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀಮತಿ ಆಶಾ ದಿನೇಶ್ ಸುವರ್ಣ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ  ನಾಯಕ ಹಜರತ್, ಕ್ರೀಡಾ ಸಂಘದ ಅಧ್ಯಕ್ಷ ರಿಫಾದ್, ಗ್ರಾಹಕ ಸಂಘದ ಅಧ್ಯಕ್ಷ ಅನಿಷ್, ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷೆ ಕುಮಾರಿ ಫಾತಿಮಾ ಶೈಫಾ, ಗಣಿತ ವಿಜ್ಞಾನ ಸಂಘದ ಅಧ್ಯಕ್ಷ ದಿಶಾ ಎಸ್‌ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯ  ಅತಿಥಿಗಳನ್ನು ಪರಿಚಯಿಸಿದರು.

ಫಾತಿಮಾ ಶೈಫಾ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.