• Home  
  • ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ವಿತರಣಾ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಸನ್ಮಾನ
- ಕರಾವಳಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಗಿಡ ವಿತರಣಾ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಸನ್ಮಾನ

Share: ಜಿಲ್ಲಾ ಗೃಹರಕ್ಷಕದಳ, ಕಾಪು ಮತ್ತು ಪಡುಬಿದ್ರಿ ಘಟಕ, ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇವರ ಜಂಟಿ ಆಶ್ರಯದಲ್ಲಿ ಶನಿವಾರ ಸರಸ್ವತಿ ಮಂದಿರ ಶಾಲೆಯ ಸಭಾಭವನದಲ್ಲಿ ವನಮಹೋತ್ಸವ ಅಂಗವಾಗಿ ನಡೆದ  ಸಸಿಗಳ ವಿತರಣಾ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ  ಸಸಿಗಳನ್ನು ವಿತರಿಸುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಶಾಸಕರು ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಭೆಯನ್ನು ಉದ್ದೇಶಿಸಿ […]

ಜಿಲ್ಲಾ ಗೃಹರಕ್ಷಕದಳ, ಕಾಪು ಮತ್ತು ಪಡುಬಿದ್ರಿ ಘಟಕ, ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇವರ ಜಂಟಿ ಆಶ್ರಯದಲ್ಲಿ ಶನಿವಾರ ಸರಸ್ವತಿ ಮಂದಿರ ಶಾಲೆಯ ಸಭಾಭವನದಲ್ಲಿ ವನಮಹೋತ್ಸವ ಅಂಗವಾಗಿ ನಡೆದ  ಸಸಿಗಳ ವಿತರಣಾ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ  ಸಸಿಗಳನ್ನು ವಿತರಿಸುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 ಶಾಸಕರು ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಠರಾದ ಡಾll. ಪ್ರಶಾಂತ್ ಶೆಟ್ಟಿ, ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಕೆ.ಸಿ ಪೂವಯ್ಯ, ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕದಳ ಡೆಪ್ಯೂಟಿ ಕಮಾಂಡೆಟ್ ರಮೇಶ್, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಶೆಟ್ಟಿ, ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಸಂಚಾಲಕ  ಗಂಗಾಧರ ಸುವರ್ಣ, ಪೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಲಕ್ಷ್ಮೀ,  ಕಾಪು ಗೃಹರಕ್ಷಕ ದಳದ ಘಟಕಾಧಿಕಾರಿಗಳಾದ ಕುಮಾರ್ ವಿ ಕೋಟ್ಯಾನ್, ಪಡುಬಿದ್ರಿ ಗೃಹರಕ್ಷಕ ದಳದ ಘಟಕಾಧಿಕಾರಿಗಳಾದ ನವೀನ್ ಕುಮಾರ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.