ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಉಡುಪಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಕಮಿಷನ್ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಕಳೆದ ಮೂರು ತಿಂಗಳಲ್ಲಿ ನಮ್ಮ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಮಾಡಿಲ್ಲ.ಹೊಸ ಯೋಜನೆಗಳನ್ನು ಮಾಡಿದರೆ ಮಾತ್ರ ಕಮಿಷನ್ ವಿಚಾರ ಬರುತ್ತದೆ. ಆನ್ ಗೋಯಿಂಗ್ ಕಾಮಗಾರಿಗಳು ನಡೆಯುತ್ತಿರುವಾಗ ಕಮಿಷನ್ ವಿಚಾರ ಎಲ್ಲಿಂದ ಬರುತ್ತದೆ?
ನಾವು ಕಮಿಷನ್ ಕೇಳಿರುವ ಯಾವುದೇ ಪ್ರಕರಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವೆ , ಬಿಬಿಎಂಪಿ ಗುತ್ತಿಗೆದಾರರಿಂದ ಬಂದಿರುವ ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ಬೋಗಸ್ ಬಿಲ್ ಆಗಿದೆಯಾ ಎಂಬ ಬಗ್ಗೆ ತನಿಖಾ ತಂಡ ವಿಚಾರಣೆ ಮಾಡುತ್ತದೆ.
ಕೇವಲ 24 ಗಂಟೆಯಲ್ಲಿ ಸ್ಯಾಂಕ್ಷನ್ ಆಗುತ್ತದೆ, ಕೆಲಸವೂ ಮುಗಿಯುತ್ತದೆ, ಇದು ಸಾಧ್ಯನಾ ?ಸಮರ್ಪಕವಾಗಿ ಕೆಲಸ ಮಾಡಿದವರಿಗೆ ಬಿಲ್ ಪಾವತಿಯಾಗುತ್ತದೆ.ಬಿಜೆಪಿ ಸಾಲ ಮಾಡಿ ಹೋಗಿದೆ.ಬೊಕ್ಕಸದ ಸ್ಥಿತಿ ಎಲ್ಲರಿಗೂ ಗೊತ್ತಿದೆ ಎಂದೂ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

1 Comment
lucyjohnson.web@gmail.com
14 August 2023Hi,
I was just browsing your website and I came up with a great plan to re-develop your website using the latest technology to generate additional revenue and beat your opponents. (emediakannada.com)
I’m an excellent web developer capable of almost anything you can come up with, and my costs are affordable for nearly everyone.
I would be happy to send you “Quotes”, “Proposal” Past work Details, “Our Packages”, and “Offers”!
Thanks in advance,
Lucy (Business Development Executive)