
ಉಡುಪಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ
ಉಡುಪಿ: ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ 77ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಗೈದರು.
ಬಳಿಕ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡಿದರು.
ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು.
ನಮ್ಮ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಮಹತ್ವ ನೀಡಲಿದೆ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ನಡೆಯುವ ದಬ್ಬಾಳಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಹರಡುವ, ಸೌಹಾರ್ದ ಕೆಡಿಸುವ ವಿಚಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಸಮಾಜದಲ್ಲಿ ಹದಗೆಟ್ಟಿದ್ದ ಸಾಮರಸ್ಯದ ವಾತಾವರಣವನ್ನು ಮರುನಿರ್ಮಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಈ ಸಮಯದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ಮಮತಾ ಕೆ.ಜಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.

