ಉಡುಪಿಯಲ್ಲಿ ಬಿಜೆಪಿ ಕ್ಷೇತ್ರದ ಅವಲೋಕನ ಸಭೆ
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆ ಶನಿವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು.
ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಮತ್ತು ಸುಮಿತ್ರಾ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಜಿಲ್ಲಾ ವಕ್ತಾರರಾದ ರಾಘವೇಂದ್ರ ಕಿಣಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಮಣಿಪಾಲ, ಸಚಿನ್ ಪೂಜಾರಿ, ಗಣೇಶ್ ಕುಲಾಲ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.