• Home  
  • ಉಡುಪಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಸಾಗಾಟ, ಮಾರಾಟ ಪ್ರಕರಣ ಪತ್ತೆ (A case of transportation and sale of a large amount of ganja was detected in Udupi)
- ಅಪರಾಧ

ಉಡುಪಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಸಾಗಾಟ, ಮಾರಾಟ ಪ್ರಕರಣ ಪತ್ತೆ (A case of transportation and sale of a large amount of ganja was detected in Udupi)

Share: ಉಡುಪಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಸಾಗಾಟ, ಮಾರಾಟ ಪ್ರಕರಣ ಪತ್ತೆ  ಇಬ್ಬರ ಬಂಧನ, 72 ಲಕ್ಷ  ಮೊತ್ತದ ಗಾಂಜಾ ಮತ್ತಿತರ ಸೊತ್ತು ವಶ (Udupi) ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಶಪಡಿಸಿಕೊಂಡಿದ್ದಾರೆ.    ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಲಾರಿಯಲ್ಲಿ ಗಾಂಜಾ […]

(Udupi) ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಶಪಡಿಸಿಕೊಂಡಿದ್ದಾರೆ.

   ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಲಾರಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ.

   ಮೈಸೂರಿನ ಗಣೇಶ  (38 ) ಮತ್ತು ಆಂಧ್ರ ಪ್ರದೇಶ ಮೂಲದ ಗೋಪಾಲ ರೆಡ್ಡಿ( 43) ಬಂಧಿತರು.

    ಆರೋಪಿಗಳಿಂದ  65 ಕಿಲೋ ಗಾಂಜಾ , ನಗದು ರೂ. 1520, ಮೊಬೈಲ್ ಗಳು ಮತ್ತು ಸಾಗಾಟ ಮಾಡಿದ ಟ್ರಕ್ ಇವುಗಳ ಒಟ್ಟು ಮೌಲ್ಯ ಸುಮಾರು 72,21,520 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

     ಈ ಬಗ್ಗೆ  ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ :  101/2025 ಕಲಂ: 8(c), 20 (b) (ii), (C) NDPS Act 1985 ರಂತೆ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.