# Tags
#ಧಾರ್ಮಿಕ

 “ಉಡುಪಿ ಉಚ್ಚಿಲ ದಸರಾ-2024″ ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ವಿದ್ಯುಕ್ತ ಚಾಲನೆ (Udupi – Uchila Dasara 2024 Launched by Udupi DC)

“ಉಡುಪಿ ಉಚ್ಚಿಲ ದಸರಾ-2024″ ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ವಿದ್ಯುಕ್ತ ಚಾಲನೆ

(Uchila) ಉಚ್ಚಿಲ : ದೇಶ ವಿದೇಶಗಳ ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ 2 ವರ್ಷಗಳಲ್ಲಿ ಆಯೋಜನೆ ಮಾಡಲಾದ ದಸರಾ ಮಹೋತ್ಸವವು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಈ ವರ್ಷ 3ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ ಸಹಯೋಗದೊಂದಿಗೆ ಅಕ್ಟೋಬರ್ 3ರಿಂದ 12ರವರೆಗೆ ನಡೆಯಲಿರುವ  “ಉಡುಪಿ ಉಚ್ಚಿಲ ದಸರಾ-2024” ಕ್ಕೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿಯವರು  ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಚಾಲನೆ ನೀಡಿದರು.

 ಸಭಾಂಗಣದಲ್ಲಿಆಕರ್ಷಕವಾಗಿ ನಿರ್ಮಿಸಲಾಗಿರುವ ಮಂಟಪದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಗಿದೆ.  

ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರು ಪ್ರತಿಷ್ಠಾಪನಾ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.

ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್‌ರವರು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕಾಪು ತಹಶಿಲ್ದಾರ್‌, ಡಾ. ಪ್ರತಿಭಾ ಆರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಉಧ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮಾತನಾಡಿ, ಈ ಬಾರಿಯ ಉಡುಪಿ – ಉಚ್ಚಿಲ ನಾಡಹಬ್ಬ ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ತಾಯಿ ಶಾರದೆ ಎಲ್ಲಾ ಜನರಿಗೆ ಮಂಗಳ ಉಂಟು ಮಾಡಲಿ ಎಂದು ಹಾರೈಸಿದರು.

ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಸಮುದ್ರದ ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು.

  ದ.ಕ. ಮೊಗವೀರ ಮಹಾಜನ  ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭ ನೆರವೇರಿತು.

 ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ,ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಕಾಪು ತಹಶಿಲ್ದಾರ್ ಡಾ. ಪ್ರತಿಭ ಆರ್., ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ ಕುಂದರ್, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ  ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ವಿನಯ ಕರ್ಕೆರ ಮಲ್ಪೆ, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ,  ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಶಿಲ್ಪ ಜಿ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ದೇವಳದ ಪ್ರಬಂಧಕ ಸತೀಷ್‌ ಅಮೀನ್‌ ಪಡುಕೆರೆ ನಿರೂಪಿಸಿದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2