# Tags
#ಧಾರ್ಮಿಕ #ವಿಡಿಯೋ

ಉಡುಪಿ – ಉಚ್ಚಿಲ ದಸರಾ 2024 ಸಾಮೂಹಿಕ ಕುಣಿತ ಭಜನೆ: (Udupi – Uchila Dasara Kunitha Bhajana)

ಉಡುಪಿ – ಉಚ್ಚಿಲ ದಸರಾ 2024 ಸಾಮೂಹಿಕ ಕುಣಿತ ಭಜನೆ

 (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಮಹಾಲಕ್ಷ್ಮೀ ದೇವಸ್ಥಾನ ದಲ್ಲಿ ಉಡುಪಿ- ಉಚ್ಚಿಲ ದಸರಾ -2024 ರ ಪ್ರಯುಕ್ತ ಉಡುಪಿ ದ.ಕ ಜಿಲ್ಲೆಯ ೫೦ ಕುಣಿತ ಭಜನಾ ತಂಡಗಳಿಂದ ಏಕಕಾಲದಲ್ಲಿ ಶ್ರೀ ಕ್ಷೇತ್ರದ ರಥಬೀದಿಯ ಸುತ್ತ ಸಾಮೂಹಿಕ ಕುಣಿತ ಭಜನೆ  ನಡೆಯಿತು.

ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪ್ರಾಂಗಣದ ಸುತ್ತ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ೫೦ಕ್ಕೂ ಅಧಿಕ ಭಜನಾ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಮೂಲಕ ಐತಿಹಾಸಿಕ ದಾಖಲೆ ಬರೆಯಿತು.  

ದಸರಾ ರೂವಾರಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ ಭಜನಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

 ಈ ಸಂದರ್ಭ ಕ್ಷೇತ್ರದ ಪ್ರಧಾನ ಅರ್ಚಕ ವೇ.ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ ಮಲ್ಪೆ, ಪ್ರಮುಖರಾದ ವಾಸುದೇವ ಸಾಲ್ಯಾನ್, ಗುಂಡು ಅಮೀನ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3 Emedia Advt1 Emedia Advt2