ಉಡುಪಿ ಉಚ್ಚಿಲ ದಸರಾ 2025: ವಿದ್ಯುತ್ ದೀಪಾಲಂಕಾರ ಉದ್ಘಾಟನೆ
ದೀಪಾಲಂಕಾರ ಉದ್ಘಾಟಿಸಿದ ದಸರಾ ರೂವಾರಿ ಡಾ. ಜಿ. ಶಂಕರ್
ಕಾಪು, ಸೆ. 21 : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025ರ ಪ್ರಯುಕ್ತ ನಗರಾಲಂಕಾರಕ್ಕಾಗಿ ವಿಶೇಷವಾಗಿ ಜೋಡಿಸಲಾಗಿರುವ ವೈವಿಧ್ಯಮಯ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರೂವಾರಿ ಡಾ. ಜಿ. ಶಂಕರ್ ಅವರು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ಶಾಲಿನಿ ಜಿ. ಶಂಕರ್ ತೆರೆದ ವೇದಿಕೆಯಲ್ಲಿ ಮತ್ತು ಶಾರದಾ ಮೂರ್ತಿಯನ್ನು ನವದುರ್ಗೆಯರು ಪ್ರತಿಷ್ಠಾಪಿಸುವ ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿಯವರೆಗೆ, ಪಡುಬಿದ್ರಿಯಿಂದ ಕಾಪು ಕೆವನ್ ಹೊಟೇಲ್ ಜಂಕ್ಷನ್, ಕೊಪ್ಪಲಂಗಡಿಯಿಂದ ಕಾಪು ಬೀಚ್‌ವರೆಗೆ ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರವನ್ನು ಜೋಡಿಸಲಾಗಿದೆ.
ಎಲ್ಲಾ ದೀಪಗಳನ್ನೂ ರವಿವಾರ ಸಂಜೆ ಏಕಕಾಲದಲ್ಲಿ ಉದ್ಘಾಟಿಸಲಾಯಿತು.
ಈ ಸಂದರ್ಭ ದಸರಾ ರೂವಾರಿ ಡಾ. ಜಿ. ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ,
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಸುವರ್ಣ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್‌ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.

