• Home  
  • ಉಡುಪಿ ಉಚ್ಚಿಲ ದಸರಾ 2026 : ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ (Udupi Uchila Dasara 2026: Fancy Dress Competition for Children as Goddess Sharada)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ - ಸಾಂಸ್ಕೃತಿಕ - ಸ್ಪರ್ಧೆ

ಉಡುಪಿ ಉಚ್ಚಿಲ ದಸರಾ 2026 : ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ (Udupi Uchila Dasara 2026: Fancy Dress Competition for Children as Goddess Sharada)

Share:  ಉಡುಪಿ ಉಚ್ಚಿಲ ದಸರಾ 2026 : ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ   ತಪಸ್ಯ ನಾಗಾಪ್ರಸಾದ್ ಪ್ರಥಮ, ಸಾನಿಕ ಕಿದಿಯೂರು ದ್ವಿತೀಯ, ಪ್ರಶ್ವಿ ಎಸ್. ಪುತ್ರನ್ ತೃತೀಯ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಕತ್ವದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಮಹಾಲಕ್ಷ್ಮಿ ದೇವಳದ ಶ್ರೀಮತಿ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ 3 ವರ್ಷದಿಂದ 9 ವರ್ಷದೊಳಗಿನ ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು. […]

(Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಕತ್ವದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಮಹಾಲಕ್ಷ್ಮಿ ದೇವಳದ ಶ್ರೀಮತಿ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ 3 ವರ್ಷದಿಂದ 9 ವರ್ಷದೊಳಗಿನ ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು.

  ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ 76 ಮುದ್ದು ಮಕ್ಕಳು ಭಾಗವಹಿಸಿದ್ದರು.

 ಸ್ಪರ್ಧಾ ವಿಜೇತರು : ತಪಸ್ಯ ನಾಗಾಪ್ರಸಾದ್ ಮಲ್ಪೆ (ಪ್ರಥಮ), ಸಾನಿಕ ಕಿದಿಯೂರು (ದ್ವಿತೀಯ), ಪ್ರಶ್ವಿ ಎಸ್. ಪುತ್ರನ್ ಸುರತ್ಕಲ್ (ತೃತೀಯ) ಬಹುಮಾನ ಪಡೆದರು.

  ಭಾಗವಹಿಸಿದ ಎಲ್ಲಾ ಮಕ್ಕಳನ್ನು ಗೌರವಿಸಲಾಯಿತು.

ಈ ಸಂದರ್ಭ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ, ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ್ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಕವಿತಾ ಶರತ್,  ದ.ಕ. ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಜತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ನಾಲ್ಕುಪಟ್ಣ ಮೊಗವೀರ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಮಹಿಳಾ ಸಂಘ ಅಧ್ಯಕ್ಷೆ ಸುಗುಣ ಕರ್ಕೇರ, ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.